ಬ್ರಹ್ಮಚಾರಿಗೆ ಅದಿತಿ ಜೋಡಿ
Team Udayavani, Apr 11, 2019, 6:38 AM IST
ಕೆಲ ದಿನಗಳ ಹಿಂದಷ್ಟೇ ನಟ ನೀನಾಸಂ ಸತೀಶ್, ನಿರ್ಮಾಪಕ ಉದಯ್ ಮೆಹ್ತಾ ನಿರ್ಮಾಣದ ಬ್ರಹ್ಮಾಚಾರಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈಗ ಇದೇ ಬ್ರಹ್ಮಾಚಾರಿ ಚಿತ್ರದಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ.
“ಬ್ರಹ್ಮಚಾರಿ’ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದು ನಟಿ ಅದಿತಿ ಪ್ರಭುದೇವ ಈ ಚಿತ್ರದಲ್ಲಿ ನೀನಾಸಂ ಸತೀಶ್ ಜೊತೆ ಹೆಜ್ಜೆ ಹಾಕಲಿದ್ದಾರೆ. ಸದ್ಯ ಅದಿತಿ ಪ್ರಭುದೇವ ಉದಯ್ ಮೆಹ್ತಾ ನಿರ್ಮಾಣದ “ಸಿಂಗ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಈಗ ಅದೇ ನಿರ್ಮಾಪಕರ ಮತ್ತೂಂದು ಚಿತ್ರದಲ್ಲೂ ನಾಯಕಿಯ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಇದೇ ಮೊದಲ ಬಾರಿಗೆ ಸತೀಶ್ ನೀನಾಸಂ ಜೊತೆಗೆ ತೆರೆ ಹಂಚಿಕೊಳ್ಳುತ್ತಿರುವ ಅದಿತಿಗೆ “ಬ್ರಹ್ಮಚಾರಿ’ ಚಿತ್ರದ ಪಾತ್ರ ಹೇಗಿರಲಿದೆ ಎಂಬ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ. ಈ ಹಿಂದೆ “ಬಾಂಬೆ ಮಿಠಾಯಿ’ ಮತ್ತು “ಡಬಲ್ ಇಂಜಿನ್’ ಸಿನಿಮಾ ಮಾಡಿದ್ದ ಮೋಹನ್ ಚಂದ್ರ ‘ಬ್ರಹ್ಮಚಾರಿ’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.
‘ಬ್ರಹ್ಮಚಾರಿ’ಗೆ 100% ವರ್ಜಿನ್ ಎಂಬ ಟ್ಯಾಗ್ ಲೈನ್ ಇದ್ದು, ಸಿನಿಮಾದಲ್ಲಿ ಸಿಕ್ಕಾಪಟ್ಟೆ ಕಾಮಿಡಿ ಇರಲಿದೆಯಂತೆ. “ಬಜಾರ್’ ಸಿನಿಮಾದ ನಂತರ ಸ್ಯಾಂಡಲ್ವುಡ್ನಲ್ಲಿ ಒಂದಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಅದಿತಿ “ತೋತಾಪುರಿ’, “ಸಿಂಗ’, “ರಂಗನಾಯಕಿ’, “ಆಪರೇಷನ್ ನಕ್ಷತ್ರ’ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ