ಅಜಯ್ ರಾವ್ ಗೆ ಹುಟ್ಟುಹಬ್ಬದ ಸಂಭ್ರಮ; 27ನೇ ಸಿನಿಮಾದ ಫಸ್ಟ್ ಲುಕ್ ಔಟ್
Team Udayavani, Jan 24, 2019, 6:35 AM IST
ಬೆಂಗಳೂರು: ಸ್ಯಾಂಡಲ್ ವುಡ್ ನಟ ಅಜಯ್ ರಾವ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಅಜಯ್ ರಾವ್ ಗೆ ಉಡುಗೊರೆ ಎಂಬಂತೆ ಗುರು ದೇಶ್ ಪಾಂಡೆ ಪ್ರೊಡಕ್ಷನ್ ನಿಂದ ನಿರ್ಮಾಣವಾಗಲಿರುವ 27ನೇ ಹೊಸ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಜಿ ಸಿನಿಮಾ ಸಂಸ್ಥೆಯಿಂದ ಅಜಯ್ ಅವರ 27ನೇ ಸಿನಿಮಾ ತಯಾರಾಗುತ್ತಿದ್ದು, ಹುಟ್ಟುಹಬ್ಬದ ದಿನವೇ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಹಾರೈಸಿದೆ. ಅಷ್ಟೇ ಅಲ್ಲ ಇನ್ನೂ ಹೆಸರಿಡದ ಸಿನಿಮಾಕ್ಕೆ ಅದ್ಭುತ ಟೈಟಲ್ ಅನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಸಿನಿಮಾ ತಂಡ ತಿಳಿಸಿದೆ.
ಗುರು ದೇಶ್ ಪಾಂಡೆ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ರಾಜವರ್ಧನ್ ಶಂಕರ್ ಈ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಗುರು ದೇಶಪಾಂಡೆ, ಜಡೇಶ್ ಕುಮಾರ್ ಮತ್ತು ರಾಜವರ್ಧನ್ ಶಂಕರ್ ಅವರದ್ದಾಗಿದೆ. ಅಜಯ್ ಸಿನಿಮಾಕ್ಕೆ ಆರೂರ್ ಸುಧಾಕರ್ ಶೆಟ್ಟಿ ಸಿನಿಮಾಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ