
ಅಭಿಮಾನಿಗಳ ಸ್ಮರಣೆಯಲ್ಲಿ ಅಂಬಿ ಬರ್ತ್‌ಡೇ
Team Udayavani, May 30, 2023, 12:05 PM IST

ರೆಬೆಲ್‌ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗ ಸೋಮವಾರ ಆಚರಿಸಿತು. ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸ್ಮಾರಕಕ್ಕೆ ಭೇಟಿ ಕೊಟ್ಟ ಕುಟುಂಬ ವರ್ಗ ಅಂಬರೀಶ್ ಅವರಿಗೆ ಇಷ್ಟವಾದ ತಿಂಡಿ ತಿನಿಸುಗಳನ್ನು ಇಟ್ಟು ಪೂಜೆ ಸಲ್ಲಿಸಿತು.
ಜೊತೆಗೆ ಪುತ್ರ ಅಭಿಷೇಕ್ ಮದುವೆ ಆಮಂತ್ರಣ ಪತ್ರಿಕೆಯನ್ನೂ ಸಮಾಧಿ ಬಳಿ ಇಟ್ಟು ಕುಟುಂಬ ವರ್ಗ ನಮಿಸಿತು. ಅಂಬರೀಶ್ ಹುಟ್ಟುಹಬ್ಬದಲ್ಲಿ ಭಾಗಿಯಾದ ಅಭಿಮಾನಿಗಳು ಅಂಬಿ ಸ್ಮರಣೆಗೈದರು.
ಅಭಿ-ಅವಿವಾ ಡ್ಯಾನ್ಸ್
ಅಂಬರೀಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ. ಈ ವೀಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಷ್ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. “ಒಲವಿನ ಉಡುಗೊರೆ’, ಚಕ್ರವ್ಯೂಹ’, “ಮಂಡ್ಯದ ಗಂಡು’ ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ವೈರಲ್ ಆಗಿದೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್ ಹೊಸ ಚಿತ್ರ ಘೋಷಣೆ?