ಲವ್ ಮಾಕ್ಟೆಲ್ಗೆ ಅಮೃತಾ ಎಂಟ್ರಿ
Team Udayavani, Feb 4, 2019, 5:47 AM IST
“ಮದರಂಗಿ’ ಕೃಷ್ಣ ಇದೇ ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ ಎಂಬ ವಿಷಯ ಗೊತ್ತೆ ಇದೆ. ಆ ಚಿತ್ರಕ್ಕೆ “ಲವ್ ಮಾಕ್ಟೆಲ್’ ಎಂಬ ಹೆಸರಿಟ್ಟಿರುವುದೂ ಗೊತ್ತು. ಮಿಲನ ನಾಗರಾಜ್ ಆ ಚಿತ್ರದ ನಾಯಕಿ ಅನ್ನುವುದನ್ನೂ ಈ ಹಿಂದೆ ಹೇಳಲಾಗಿತ್ತು. ಆದರೆ, ಮದರಂಗಿ ಕೃಷ್ಣ ಚಿತ್ರದಲ್ಲಿ ಮೂವರು ನಾಯಕಿಯರು ಎಂದು ಹೇಳಿದ್ದರು. ಆ ಪೈಕಿ ಒಬ್ಬರು ಮಾತ್ರ ಆಯ್ಕೆಯಾಗಿದ್ದು, ಇನ್ನಿಬ್ಬರ ಆಯ್ಕೆ ನಡೆಯುತ್ತಿದೆ ಎಂದು ಹೇಳಿದ್ದರು.
ಈಗ ಮತ್ತೂಬ್ಬ ನಾಯಕಿಯ ಆಯ್ಕೆಯಾಗಿದೆ. ಅದು ಅಮೃತಾ ಅಯ್ಯಂಗಾರ್. ಈಗಾಗಲೇ ಚಿತ್ರತಂಡವನ್ನು ಸೇರಿಕೊಂಡಿರುವ ಅಮೃತಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ .ನಿರ್ದೇಶಕ ಕೃಷ್ಣ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಇದೊಂದು ಎಮೋಷನಲ್ ಲವ್ಸ್ಟೋರಿಯಾಗಿದ್ದು, ಮೂರು ಭರ್ಜರಿ ಆ್ಯಕ್ಷನ್ ಕೂಡ ಇಲ್ಲಿರಲಿದೆ.
ನಾಯಕನ ಬದುಕಿನಲ್ಲಿ ಮೂರು ಹಂತಗಳು ಬರಲಿದ್ದು, ಒಂದೊಂದು ಹಂತದಲ್ಲಿ ಒಂದೊಂದು ಕಥೆ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಆ ಕಥೆ ಮೂಲಕ ನಾಯಕನ ಲೈಫ್ ಕೂಡ ಬದಲಾಗುತ್ತಾ ಹೋಗುತ್ತದೆ ಎನ್ನುತ್ತಾರೆ ಕೃಷ್ಣ. ಈ ಚಿತ್ರದಲ್ಲಿ ಮೂವರು ನಾಯಕಿಯರು ನಟಿಸುತ್ತಿದ್ದಾರೆ. ಆ ಮೂವರು ನಾಯಕಿಯರ ಪೈಕಿ ಮಿಲನ ನಾಗರಾಜ್ ಮತ್ತು ಅಮೃತಾ ಆಯ್ಕೆಯಾಗಿದ್ದಾರೆ. ಇನ್ನೊಬ್ಬ ನಾಯಕಿಗೆ ಹುಡುಕಾಟ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ