
‘ಆರಾಮ್ ಅರವಿಂದ್ ಸ್ವಾಮಿ‘ ಫಸ್ಟ್ ಲುಕ್ ರಿಲೀಸ್
Team Udayavani, Mar 25, 2023, 12:30 PM IST

ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ “ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾದ ಫಸ್ಟ್‌ಲುಕ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನಾ ನಾಗರಾಜ್ ಹಾಗೂ ಹೃತಿಕಾ ಶ್ರೀನಿವಾಸ್ ಅನೀಶ್ ಜೊತೆ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಚಿತ್ರತಂಡ ಚಿತ್ರದ ಪೋಸ್ಟರ್ ಮೂಲಕ ಹೊಸ ಗೆಟಪ್‌ನಲ್ಲಿ ಅನೀಶ್ ತೇಜೇಶ್ವರ್ ಗಮನ ಸೆಳೆಯುತ್ತಿದೆ.
ಇದನ್ನೂ ಓದಿ:Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?
ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದ್ದು, ಶ್ರೀಕಾಂತ್ ಪ್ರಸನ್ನ ಹಾಗೂ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಹಂತಗಳ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಮೂರನೇ ಶೆಡ್ನೂಲ್ ಕೇರಳದಲ್ಲಿ ಮಾಡಲಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ
ಟಾಪ್ ನ್ಯೂಸ್
