ಅರ್ಜುನ್‌ ಜನ್ಯ ಬ್ಯಾಕ್‌ ಟು ವರ್ಕ್‌


Team Udayavani, Mar 21, 2020, 7:03 AM IST

janya

ದಿಢೀರನೇ ಹೃದಯಾಘಾತಕ್ಕೆ ಒಳಗಾಗಿದ್ದ ಅರ್ಜುನ್‌ ಜನ್ಯ, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರು ವಿಶ್ರಾಂತಿ ಸೂಚಿಸಿದ್ದ ಹಿನ್ನೆಲೆಯಲ್ಲಿ 20 ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಈಗ ಪುನಃ ತಮ್ಮ ಕೆಲಸಕ್ಕೆ ಮರಳಿದ್ದಾರೆ.

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಇದೀಗ ಚೇತರಿಸಿಕೊಂಡು ಪುನಃ ಕೀ ಬೋರ್ಡ್‌ ಮೇಲೆ ಕೈಯಾಡಿಸುವ ಮೂಲಕ ಕೆಲಸ ಶುರು ಮಾಡಿದ್ದಾರೆ. ಹೌದು, ಕಳೆದ ತಿಂಗಳು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮೈಸೂರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆ ಬಳಿಕ ಸಣ್ಣ ಹೃದಯಾಘಾತ ಆಗಿದ್ದ ಕುರಿತು ವೈದ್ಯರು ಎಚ್ಚರಿಸಿ, ವಿಶ್ರಾಂತಿಗೆ ತಿಳಿಸಿದ್ದರು.

ಈಗ ವಿಶ್ರಾಂತಿ ಬಳಿಕ ಪುನಃ ತಮ್ಮ ಕೆಲಸ ಮುಂದುವರೆಸಿದ್ದಾರೆ. ಅಂದಹಾಗೆ, “ಜೋಗಿ’ ಪ್ರೇಮ್‌ ನಿರ್ದೇಶನದ “ಏಕ್‌ ಲವ್‌ ಯಾ’ ಸಿನಿಮಾಗೆ ಅರ್ಜುನ್‌ ಜನ್ಯ ಸಂಗೀತ ನೀಡುತ್ತಿದ್ದಾರೆ. ಎದೆನೋವು ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದ ಅರ್ಜುನ್‌ ಜನ್ಯ ಚಿತ್ರದ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಈಗ ಆ ಕೆಲಸ ಪೂರ್ಣಗೊಳಿಸಲು ಸಜ್ಜಾಗಿದ್ದಾರೆ. ಅರ್ಜುನ್‌ ಜನ್ಯ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಅವರ ಸಂಗೀತ ನಿರ್ದೇಶನದ ಹಲವು ಚಿತ್ರಗಳು ಇದೀಗ ಬಿಡುಗಡೆಗೂ ರೆಡಿಯಾಗಿವೆ.

ಹಾಗಾಗಿ, ಅರ್ಧಕ್ಕೆ ನಿಂತಿದ್ದ ಸಣ್ಣಪುಟ್ಟ ಕೆಲಸಗಳನ್ನು ಈಗ ಪೂರ್ಣಗೊಳಿಸುತ್ತಿದ್ದಾರೆ. ನಿರ್ದೇಶಕ ಪ್ರೇಮ್‌ ಅವರು, ಅರ್ಜುನ್‌ ಜನ್ಯ ತಮ್ಮ ಚಿತ್ರಕ್ಕೆ ಸಂಗೀತ ಕೆಲಸ ಶುರು ಮಾಡಲು ಅಣಿಯಾಗಿರುವ ಫೋಟೋವೊಂದನ್ನು ಕ್ಲಿಕ್ಕಿಸಿ, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿ, “ಏಕ್‌ ಲವ್‌ ಯಾ’ ಚಿತ್ರದ ಸಂಗೀತ ಕೆಲಸ ಶುರುವಾಗಿದೆ ಎಂದು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮ್ಯೂಸಿಕ್‌ “ಬೀಟ್ಸ್‌ ಇರೋವರೆಗೂ ಹಾರ್ಟ್‌ ಬೀಟ್‌ ಯಾವತ್ತೂ ನಿಲ್ಲಲ್ಲ ಅಂತ ವಾಪಸ್‌ ಬಂದಿದ್ದಾರೆ ನಮ್‌ ಅರ್ಜುನ್‌ ಜನ್ಯ.

ಇಷ್ಟರಲ್ಲೇ ಚಿತ್ರದ ಆಡಿಯೋ ಹೊರಬರಲಿದೆ ಎಂದು ಈ ವೇಳೆ ತಿಳಿಸಿದ್ದಾರೆ ಪ್ರೇಮ್‌. ಇನ್ನು, ಅರ್ಜುನ್‌ ಜನ್ಯ ಅವರು ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋಗೂ ಭಾಗಿಯಾಗುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ವಿಡಿಯೊ ಮೂಲಕ ಮಾತನಾಡಿದ್ದು, ಶೀಘ್ರವೇ ಶೋನಲ್ಲಿ ಭಾಗಿಯಾಗಲಿದ್ದಾರೆ. ಸದ್ಯ ಅರ್ಜುನ್‌ ಜನ್ಯ “ರಾಬರ್ಟ್‌’, “ಕೋಟಿಗೊಬ್ಬ-3′, “ಗಾಳಿಪಟ-2′, “ಮದಗಜ’ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಮ್ಯೂಸಿಕ್‌ ಬೀಟ್ಸ್‌ ಇರೋ ವರೆಗೂ ಹಾರ್ಟ್‌ ಬೀಟ್‌ ಯಾವತ್ತೂ ನಿಲ್ಲಲ್ಲ ಅಂತ ವಾಪಸ್‌ ಬಂದಿದ್ದಾರೆ ನಮ್‌ ಅರ್ಜುನ್‌ . ಇಷ್ಟರಲ್ಲೇ ಚಿತ್ರದ ಆಡಿಯೋ ಹೊರಬರಲಿದೆ .
-ಪ್ರೇಮ್‌

ಟಾಪ್ ನ್ಯೂಸ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.