ಶಿವಣ್ಣನ ಚಿತ್ರಕ್ಕೆ ಅರ್ಜುನ್ ಜನ್ಯ ನಿರ್ದೇಶನ


Team Udayavani, Jun 14, 2022, 11:55 AM IST

Arjun Janya to direct a movie to Shiva rajkumar

ಕನ್ನಡ ಚಿತ್ರರಂಗದಲ್ಲಿ ಸಂಗೀತ ಸಂಯೋಜಕನಾಗಿ, ಗಾಯಕನಾಗಿ ಗುರುತಿಸಿಕೊಂಡಿರುವ ಅರ್ಜುನ್‌ ಜನ್ಯ, ಈಗ ಡೈರೆಕ್ಟರ್‌ ಕ್ಯಾಪ್‌ಧರಿಸಿ, ಸಿನಿಮಾ ನಿರ್ದೇಶಕನ ಸ್ಥಾನ ಅಲಂಕರಿಸುತ್ತಿದ್ದಾರೆ.

ಹೌದು, ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ ಹೊಸಚಿತ್ರಕ್ಕೆ ಅರ್ಜುನ್‌ ಜನ್ಯ ನಿರ್ದೇಶನ ಮಾಡುತ್ತಿದ್ದು, ಈ ಮೂಲಕ ಅರ್ಜುನ್‌ ಜನ್ಯ ನಿರ್ದೇಶಕರಾಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆ. ಅಂದಹಾಗೆ, ಅರ್ಜುನ್‌ ಜನ್ಯ ನಿರ್ದೇಶನ ಮಾಡುತ್ತಿರುವ ಮಾಹಿತಿಯನ್ನು ಸ್ವತಃ ನಾಯಕ ನಟ ಶಿವರಾಜ ಕುಮಾರ್‌ ಅವರೇ ಖುದ್ದಾಗಿ ಹಂಚಿಕೊಂಡಿದ್ದಾರೆ.

ತಮ್ಮ ನಿವಾಸದಲ್ಲಿ ನಡೆದ “ಬೈರಾಗಿ’ ಸಿನಿಮಾದ ಪತ್ರಿಕಾಗೋಷ್ಟಿ ವೇಳೆ ಮಾತನಾಡಿದ ಶಿವರಾಜ ಕುಮಾರ್‌, ತಮ್ಮ ಮತ್ತು ಅರ್ಜುನ್‌ ಜನ್ಯ ಕಾಂಬಿನೇಶನ್‌ ಸಿನಿಮಾದ ಬಗ್ಗೆ ಮಾತನಾಡಿದರು. “ಅರ್ಜುನ್‌ ಜನ್ಯ ಮಾಡಿಕೊಂಡಿರುವ ಸಬ್ಜೆಕ್ಟ್ ತುಂಬ ಚೆನ್ನಾಗಿದೆ. ಕಥೆ ಕೇಳಿ ನಾನೂ ಕೂಡ ತುಂಬ ಎಕ್ಸೈಟ್‌ ಆಗಿದ್ದೇನೆ. ಸದ್ಯ ಈ ಸಬ್ಜೆಕ್ಟ್ ಮೇಲೆ ಸ್ಕ್ರಿಪ್ಟ್ ಕೆಲಸಗಳು ಶುರುವಾಗುತ್ತಿದೆ. ಪ್ರೀ-ಪ್ರೊಡಕ್ಷನ್‌ ಕೆಲಸಗಳಿಗೆ ಐದಾರು ತಿಂಗಳು ಬೇಕಾಗಬಹುದು’ ಎಂದು ತಿಳಿಸಿದ್ದಾರೆ.

ಜೂ. 17ಕ್ಕೆ ರಾಕ್‌ಲೈನ್‌ ಜೊತೆ ಹೊಸಚಿತ್ರ ಇನ್ನು ಶಿವರಾಜಕುಮಾರ್‌, ಪ್ರಭುದೇವ ಅವರ ಕಾಂಬಿನೇಶನ್‌ನಲ್ಲಿ ಬರಲಿರುವ ಹೊಸ ಸಿನಿಮಾಕ್ಕೆ ಯೋಗರಾಜ್‌ ಭಟ್‌ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಯ ಬಗ್ಗೆಯೂ ಇದೇ ವೇಳೆ ಒಂದಷ್ಟು ಅಪ್ಡೇಟ್‌ ಸಿಕ್ಕಿದೆ.

ಶಿವರಾಜ ಕುಮಾರ್‌, ಪ್ರಭುದೇವ ಮತ್ತು ಯೋಗರಾಜ್‌ ಭಟ್‌ ಮೂವರ ಸಮಾಗಮದಲ್ಲಿ ಮೂಡಿಬರುತ್ತಿರುವ ಹೊಸಚಿತ್ರಕ್ಕೆ ಇದೇ ಜೂ. 17ಕ್ಕೆ ಮುಹೂರ್ತ ನಡೆಯಲಿದೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಮೊದಲ ಬಾರಿಗೆ ಶಿವಣ್ಣ – ಪ್ರಭುದೇವ ತೆರೆಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸರಳವಾಗಿ ಜನ್ಮದಿನ ಆಚರಣೆ: ಈ ವರ್ಷ ಶಿವರಾಜ್‌ ಕುಮಾರ್‌ 60ನೇ ವರ್ಷಕ್ಕೆ ಕಾಲಿಡುತ್ತಿದ್ದು, ಶಿವಣ್ಣ ಹುಟ್ಟುಹಬ್ಬವನ್ನು ಈ ಬಾರಿ ಅದ್ಧೂರಿ ಮತ್ತು ಸಡಗರದಿಂದ ಆಚರಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಪುನೀತ್‌ ರಾಜಕುಮಾರ್‌ ನಿಧನದ ಹಿನ್ನೆಲೆಯಲ್ಲಿ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಶಿವರಾಜ ಕುಮಾರ್‌ ನಿರ್ಧರಿಸಿದ್ದಾರೆ.

ಬೈರಾಗಿ’ ದರ್ಶನಕ್ಕೆ ರೆಡಿ: ಜುಲೈ 1ರಂದು ಶಿವರಾಜಕುಮಾರ್‌ ಅಭಿನಯದ “ಬೈರಾಗಿ’ ಸಿನಿಮಾ ಬಿಡುಗಡೆಯಾಗುತ್ತಿದೆ. ಇನ್ನು “ಬೈರಾಗಿ’ ಚಿತ್ರತಂಡ ಶಿವಣ್ಣ ಹುಟ್ಟುಹಬ್ಬಕ್ಕೂ ಮುನ್ನ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಎಂದು ಶಿವಣ್ಣ ತಿಳಿಸಿದ್ದಾರೆ. ಶಿವರಾಜ ಕುಮಾರ್‌ ಹುಟ್ಟುಹಬ್ಬಕ್ಕಾಗಿ ಹತ್ತು ದಿನ ಮೊದಲೇ ಬೈರಾಗಿ ಸಿನಿಮಾ ರಿಲೀಸ್‌ ಆಗುತ್ತಿದ್ದು, ಚಾಮರಾಜನಗರದಲ್ಲಿ ಪ್ರಿ-ರಿಲೀಸ್‌ ಇವೆಂಟ್‌ ನಡೆಯಲಿದೆ. ಜೂ. 25 ರಂದು ಚಾಮರಾಜನಗರದಲ್ಲಿ ಪ್ರೀ-ಇವೆಂಟ್‌ ಕಾರ್ಯಕ್ರಮ ಆಯೋಜನೆಯಾಗಿದ್ದು, ಜೂ 24 ರಂದು ರಾಮನಗರದಿಂದ ಮೈಸೂರುವರೆಗೆ ರೋಡ್‌ ಶೋ ಕೂಡ ನಡೆಯಲಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.