“ಪುಷ್ಕರ್‌’ ಚಿತ್ರಕ್ಕೆ ಆರೋಹಿ ನಾಯಕಿ

Team Udayavani, Jan 28, 2020, 7:00 AM IST

ಸದ್ಯ “ಭೀಮಸೇನ ನಳಮಹರಾಜ’ ಚಿತ್ರ ತೆರೆಗೆ ಬರುವ ನಿರೀಕ್ಷೆಯಲ್ಲಿರುವ ನಟಿ ಆರೋಹಿ ನಾರಾಯಣ್‌ ಈಗ ಸದ್ದಿಲ್ಲದೆ ಮತ್ತೂಂದು ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. “ಪುಷ್ಕರ್‌ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನ್‌ ನಿರ್ಮಿಸುತ್ತಿರುವ ಹೊಸಚಿತ್ರದಲ್ಲಿ ಆರೋಹಿ ನಾರಾಯಣ್‌ ನಾಯಕಿಯಾಗಿ ಅಭಿನಯಿಸುತ್ತಿದ್ದು, ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳಿಗೆ ನಿಧಾನವಾಗಿ ಚಾಲನೆ ಸಿಕ್ಕಿದೆ.

ರೊಮ್ಯಾಂಟಿಕ್‌ ಕಾಮಿಡಿ ಕಥಾ ಹಂದರ ಹೊಂದಿರುವ ಈ ಚಿತ್ರದ ಟೈಟಲ್‌, ಇತರೆ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರ ಬೇಕಿದೆ. ಈ ಬಗ್ಗೆ ಮಾತನಾಡುವ ಆರೋಹಿ ನಾರಾಯಣ್‌, “ನನ್ನ ಬರ್ತ್‌ಡೇ ಸಂದರ್ಭದಲ್ಲಿ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನ್‌ ತಮ್ಮ ಮುಂದಿನ ಹೊಸಚಿತ್ರದಲ್ಲಿ ಹೀರೋಯಿನ್‌ ಆಗಿ ನನ್ನ ಹೆಸರನ್ನು ಅನೌನ್ಸ್‌ ಮಾಡಿದ್ದಾರೆ.

ಚಿತ್ರದ ಕಥೆ ಇನ್ನೂ ಸ್ಕ್ರಿಪ್ಟ್ ಹಂತದಲ್ಲಿ ಇರುವುದರಿಂದ ಈಗಲೇ ಅದರ ಬಗ್ಗೆ ಹೆಚ್ಚೇನು ಹೇಳಲಾರೆ. ನನ್ನ ಪಾತ್ರ ಈ ಚಿತ್ರದಲ್ಲಿ ಹೊರತರದಲ್ಲಿದ್ದು, ಚಿತ್ರದ ಬಗ್ಗೆ ಮತ್ತು ನನ್ನ ಪಾತ್ರದ ಬಗ್ಗೆ ನಾನೂ ಕೂಡ ಕುತೂಹಲ ಇಟ್ಟುಕೊಂಡಿದ್ದೇನೆ’ ಎನ್ನುತ್ತಾರೆ. ಅಂದ ಹಾಗೆ, ಇನ್ನೂ ಹೆಸರಿಡದ ಈ ಚಿತ್ರ ಇದೇ ಮೇ ಅಥವಾ ಜೂನ್‌ ತಿಂಗಳಿನಲ್ಲಿ ಚಿತ್ರೀಕರಣ ಆರಂಭಿಸಲಿದೆ ಎನ್ನಲಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ