ಅಸತೋಮ ಸದ್ಗಮಯ ಬಿಡುಗಡೆಯಾಗೋಕೆ ರೆಡಿ
Team Udayavani, Mar 9, 2018, 2:52 PM IST
ಐಕೇರ್ ಮೂವೀಸ್ ಲಾಂಛನದಡಿಯಲ್ಲಿ, ಅಶ್ವಿನ್ ಪಿರೇರಾರವರು ನಿರ್ಮಿಸುತ್ತಿರುವ “ಅಸತೋಮ ಸದ್ಗಮಯ’ ಕನ್ನಡ ಚಲನಚಿತ್ರವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ ಸೆನ್ಸಾರ್ ಹಂತಕ್ಕೆ ತಲುಪಿದೆ. “ಅಸತೋಮ ಸದ್ಗಮಯ’ ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಮಹಿಳೆಯರು ಮತ್ತು ಮಕ್ಕಳು ನೋಡಲೇಬೆಕಾದಂತಹ ಸಿನಿಮಾ ಎಂಬುದು ನಿರ್ದೇಶಕರ ಅಭಿಪ್ರಾಯ.
ಸದ್ಯದಲ್ಲೇ ಈ ಚಿತ್ರದ ಆಡಿಯೋ ಸಿಡಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ವಿಜಯಪ್ರಕಾಶ್, ಅನುರಾಧ ಭಟ್, ಪದ್ಮಲತಾ ಅವರ ಕಂಠಗಳಲ್ಲಿ ಎಲ್ಲಾ ಹಾಡುಗಳು ಚೆನ್ನಾಗಿ ಮೂಡಿಬಂದಿವೆ ಎನ್ನುತ್ತದೆ ಚಿತ್ರತಂಡ.
ಎಲ್ಲಾ ಅಂದುಕೊಂಡಂತೆ ಆದರೆ ಚಿತ್ರವನ್ನು ಏಪ್ರಿಲ್ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುವ ಯೋಚನೆಯಿದೆ ಎನ್ನುತ್ತಾರೆ ನಿರ್ಮಾಪಕರು. ಈ ಚಿತ್ರದಲ್ಲಿ ರಾಧಿಕಾ ಚೇತನ್ ಜೊತೆಗೆ ಕಿರಣ್ ರಾಜ್ ಹಾಗೂ ಲಾಸ್ಯ ನಾಗರಾಜ್ ಅವರು ಮುಖ್ಯಭೂಮಿಕೆಯಲ್ಲಿದ್ದು, ರಾಜೇಶ್ ವೇಣೂರ್ರವರ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ