ನ.28ಕ್ಕೆ “ಅವನೇ ಶ್ರೀಮನ್ನಾರಾಯಣ’ ಟ್ರೇಲರ್
ಐದು ಭಾಷೆಗಳಲ್ಲಿ ರಕ್ಷಿತ್ ಶೆಟ್ಟಿ ಚಿತ್ರ
Team Udayavani, Nov 25, 2019, 6:05 AM IST
“ಅವನೇ ಶ್ರೀಮನ್ನಾರಾಯಣ’ನ ಹವಾ ಶುರುವಾಗಿದೆ. ಚಿತ್ರದ ಟೀಸರ್ ನೋಡಿಯೇ ಫಿದಾ ಆಗಿದ್ದ ಸಿನಿ ಪ್ರೇಮಿಗಳು ಈಗ ಮತ್ತಷ್ಟು ಕಾತುರದಿಂದ ಎದುರು ನೋಡುವಂತಹ ಒಂದೊಂದೇ ಅಂಶಗಳನ್ನು ಚಿತ್ರತಂಡ ಬಿಡುತ್ತಿದೆ. ಸದ್ಯ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಿದ್ದು, ಫಸ್ಟ್ಲುಕ್ ಹಿಟ್ಲಿಸ್ಟ್ ಸೇರಿದೆ. ಇದರ ಜೊತೆಗೆ ಚಿತ್ರದ ಟ್ರೇಲರ್ ರಿಲೀಸ್ ದಿನಾಂಕವನ್ನೂ ಚಿತ್ರತಂಡ ಅನೌನ್ಸ್ ಮಾಡಿದೆ.
ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಸಿನಿಪ್ರೇಮಿಗಳಲ್ಲಿತ್ತು. ಈಗ ಅದಕ್ಕೂ ಉತ್ತರ ಸಿಕ್ಕಿದ್ದು, ನವೆಂಬರ್ 28 ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಎಲ್ಲರಿಗೂ ಗೊತ್ತಿರುವಂತೆ “ಅವನೇ ಶ್ರೀಮನ್ನಾರಾಯಣ’ ಚಿತ್ರ ಪ್ಯಾನ್ ಇಂಡಿಯಾ ಬಿಡುಗಡೆಯಾಗುತ್ತಿದ್ದು, ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ತೆರೆಕಾಣಲಿದೆ. ಹಾಗಾಗಿ, ಐದು ಭಾಷೆಗಳ ಟ್ರೇಲರ್ ಕೂಡಾ ನ.28 ರಂದು ಬಿಡುಗಡೆಯಾಗಲಿದೆ.
ಈಗಾಗಲೇ ಚಿತ್ರದ ನಿರ್ಮಾಪಕ ಪುಷ್ಕರ್ ಚಿತ್ರದ ಬಿಡುಗಡೆಯ ಪೂರ್ವ ತಯಾರಿಯಲ್ಲಿ ತೊಡಗಿದ್ದು, ಚೆನ್ನೈ, ಹೈದರಾಬಾದ್, ಮುಂಬೈ ಎಂದು ಓಡಾಡುತ್ತಿದ್ದಾರೆ. ಸಚಿನ್ ಈ ಚಿತ್ರದ ನಿರ್ದೇಶಕರು. ರಕ್ಷಿತ್ ಶೆಟ್ಟಿ ನಾಯಕರಾಗಿರುವ ಈ ಚಿತ್ರದಲ್ಲಿ ಶಾನ್ವಿ ನಾಯಕಿ. ಇದೊಂದು ಯುನಿವರ್ಸಲ್ ಸಬ್ಜೆಕ್ಟ್ ಆಗಿದ್ದರಿಂದ ಚಿತ್ರವನ್ನು ಪ್ಯಾನ್ ಇಂಡಿಯಾ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಚಿತ್ರ ಡಿಸೆಂಬರ್ 27 ರಂದು ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ