Bachelor Party: ಬ್ಯಾಚುಲರ್ ಗೆ ವಾರ್ನಿಂಗ್‌ ಸಾಂಗ್‌


Team Udayavani, Jan 2, 2024, 10:48 AM IST

bachelor party kannada movie song out

ರಕ್ಷಿತ್‌ ಶೆಟ್ಟಿ ನಿರ್ಮಾಣದ “ಬ್ಯಾಚುಲರ್‌ ಪಾರ್ಟಿ’ ಚಿತ್ರ ಜನವರಿ 26ರಂದು ಬಿಡುಗಡೆಯಾಗುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗಾಗಲೇ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡಿದೆ. ಅದು ವಾರ್ನಿಂಗ್‌ ಸಾಂಗ್‌ ಎಂಬುದು ಹೈಲೈಟ್‌. ಇದು ಮದುವೆ ಆದವರಿಗೆ, ಆಗ ಬಯಸುವವರಿಗಾಗಿಯೇ ಮಾಡಿರುವ ಥೀಮ್‌ ಸಾಂಗ್‌ ಎನ್ನುವುದು ವಿಶೇಷ. “ಬ್ಯಾಡವೋ ಮಗನೇ ನೂರು ಥರದ ಸ್ಕ್ಯಾಮು ಮಾಡುವೆ… ನಾಲ್ಕು ದಿನ ನಗಿಸಿ ಮುಗಿಸೇ ಬಿಡುವ ಸ್ಕೀಮು ಮಾಡುವೆ…’ ಎಂಬ ಹಾಡು ಇದಾಗಿದ್ದು, ಈ ಹಾಡಿಗೆ ವಿಜಯ ಪ್ರಕಾಶ್‌ ಧ್ವನಿಯಾಗಿದ್ದಾರೆ.

ಅಭಿಜಿತ್‌ ಮಹೇಶ್‌ ಹಾಗೂ ವೀರೇಶ್‌ ಶಿವಮೂರ್ತಿ ಸಾಹಿತ್ಯ ರಚಿಸಿದ್ದು, ಅರ್ಜುನ್‌ ರಾಮು ಸಂಗೀತ ಸಂಯೋಜಿಸಿದ್ದಾರೆ. ಭೂಷಣ್‌ ನೃತ್ಯ ನಿರ್ದೇಶನ ಚಿತ್ರಕ್ಕಿದೆ.  ಜಾಲಿಯಾಗಿ ಕಾಲೆಳೆಯುತ್ತಾ ಈ ಹಾಡು ಸಾಗಿದೆ.

“ಕಿರಿಕ್‌ ಪಾರ್ಟಿ’ಯ ಬರಹಗಾರ ಅಭಿಜಿತ್‌ ಮಹೇಶ್‌ ಈ ಸಿನಿಮಾದ ನಿರ್ದೇಶಕರು. ಈಗಾಗಲೇ ರಕ್ಷಿತ್‌ ಶೆಟ್ಟಿ, ರಿಷಬ್‌ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, “ಬ್ಯಾಚುಲರ್‌ ಪಾರ್ಟಿ’ಗೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು.

ಇನ್ನು, ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಫ‌ಸ್ಟ್‌ ಲುಕ್‌ ಪೋಸ್ಟರ್‌ನಲ್ಲಿ ದಿಗಂತ್‌, ಲೂಸ್‌ ಮಾದ ಯೋಗಿ ಹಾಗೂ ಅಚ್ಯುತ್‌ ಕುಮಾರ್‌ ಇದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‌ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್‌ಚೇ ರ್‌ ನ ಲ್ಲಿ ಅಚ್ಯುತ್‌ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್‌ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ವಿಶೇಷವೆಂದರೆ ಈ ಪೋಸ್ಟರ್‌ ಅನ್ನು ಹ್ಯಾಂಡ್‌ ಸ್ಕೆಚ್‌ ಮೂಲಕ ಡಿಸೈನ್‌ ಮಾಡಲಾಗಿದೆ.

ಪರಂವಃ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ರಕ್ಷಿತ್‌ ಶೆಟ್ಟಿ ಹಾಗೂ ಅಮಿತ್‌ ಗುಪ್ತ  ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್‌ ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.