“ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರಕ್ಕೆ ಹಿನ್ನೆಲೆ ಸಂಗೀತ
Team Udayavani, Jan 7, 2019, 6:04 AM IST
ಸಂಚಾರಿ ವಿಜಯ್, ಮಯೂರಿ, ಶೋಭರಾಜ್, ದುನಿಯ ರಶ್ಮಿ, ಅಚ್ಯುತ್ ಕುಮಾರ್, ಭರತ್ ಸಾಗರ್, ಗೌತಮ್, ಮುಂತಾದ ಕಲಾವಿದರು ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿರುವ “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಸದ್ಯ ಈ ಚಿತ್ರದ ಹಿನ್ನೆಲೆ ಸಂಗೀತ ಕಾರ್ಯ ರಾಜೇಶ್ ರಾಮನಾಥ್ ಸ್ಟುಡಿಯೋದಲ್ಲಿ ನಡೆಯುತ್ತಿದೆ.
“ವಸುಂಧರ ಕೃತಿಕ್ ಫಿಲಂಸ್’ ಬ್ಯಾನರ್ನಲ್ಲಿ “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರ ನಿರ್ಮಾಣವಾಗುತ್ತಿದ್ದು, ಚಿತ್ರಕ್ಕೆ ರಾಮಚಂದ್ರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ದೃಶ್ಯಗಳನ್ನು ಪರಮೇಶ್ ಸಿ.ಎಂ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಉಗ್ರಂ ಶ್ರೀಕಾಂತ್ ಚಿತ್ರದ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ.
ಚಿತ್ರದ ಹಾಡುಗಳಿಗೆ ನಾಭಿನ್ ಪೌಲ್ ಸಂಗೀತ ಸಂಯೋಜನೆ ಮತ್ತು ಮದನ್ ಹರಿಣಿ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರದ ಸಾಹಸ ದೃಶ್ಯಗಳಿಗೆ ಸೂಪರ್ ಜೋನ್ಸ್ ನಿರ್ದೇಶನವಿದೆ. ಸೈಕಾಲಾಜಿಕಲ್, ಥ್ರಿಲ್ಲರ್ ಕಥಾಹಂದರವಿರುವ “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಚಿತ್ರ ಮುಂದಿನ ಮಾರ್ಚ್ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ