ಗಣೇಶ ಚತುರ್ಥಿಗೆ ಬಿಗ್ ಗಿಫ್ಟ್ ನೀಡಲು ಸಿದ್ಧವಾದ ಭಜರಂಗಿ 2!
Team Udayavani, Jul 20, 2021, 5:48 PM IST
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಹರ್ಷಾ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಭಜರಂಗಿ- 2 ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಗಣೇಶ ಹಬ್ಬಕ್ಕೆ ದೊಡ್ಡ ಪರದೆ ಮೇಲೆ ಲಗ್ಗೆ ಇಡಲು ಸಿನಿಮಾ ಸಜ್ಜಾಗಿದೆ ಎಂದು ಚಿತ್ರ ತಂಡದಿಂದ ಮಾಹಿತಿ ಲಭ್ಯವಾಗಿದೆ.
ಕೋವಿಡ್ ಕಾರಣದಿಂದ ಸಂಪೂರ್ಣ ಲಾಕ್ ಡೌನ್ ಆಗಿದ್ದ ಚಿತ್ರ ಮಂದಿರಗಳು ಯಾವ ಸಿನಿಮಾವನ್ನು ಜನರಿಗೆ ತೋರಿಸಿರಲಿಲ್ಲ. ಇದೀಗ ಸರ್ಕಾರ ಚಿತ್ರ ಪ್ರದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಸೆಪ್ಟೆಂಬರ್ 10ಕ್ಕೆ ಶಿವಣ್ಣ ಅಭಿನಯದ ಭಜರಂಗಿ 2 ಸಿನಿಮಾ ರಿಲೀಸ್ ಆಗುತ್ತಿದೆ ಎಂದು ನಿರ್ಮಾಪಕ ಜಯಣ್ಣ ತಿಳಿಸಿದ್ದಾರೆ.
ಇನ್ನು ಹರ್ಷಾ ನಿರ್ದೇಶನ ಮಾಡಿರುವ ಈ ಚಿತ್ರದ ಟೀಸರ್ ಈಗಾಗಲೇ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿದೆ. ಇನ್ನು ಸಿನಿಮಾ ಯಾವ ರೀತಿ ಮೂಡಿ ಬರಲಿದೆ ಎಂಬುದು ಅಭಿಮಾನಿಗಳ ಕುತೂಹಲವಾಗಿದ್ದು, ಗಣೇಶ ಚತುರ್ಥಿಗೆ ಕುತೂಹಲ ತಣಿಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…