ಹಿಂದಿಗೆ ಬಜಾರ್‌ ಡಬ್ಬಿಂಗ್‌ ಹಕ್ಕು ಮಾರಾಟ


Team Udayavani, Aug 21, 2018, 11:23 AM IST

bazzar.jpg

ಕನ್ನಡ ಚಿತ್ರರಂಗದಲ್ಲಿ ಈಗ ಡಬ್ಬಿಂಗ್‌ ಹಕ್ಕುಗಳು ಸಖತ್‌ ಸೌಂಡ್‌ ಮಾಡುತ್ತಿದೆ. ಕನ್ನಡ ಚಿತ್ರಗಳ ಡಬ್ಬಿಂಗ್‌ ರೈಟ್ಸ್‌ಗಳು ಹಿಂದಿಗೆ ಒಳ್ಳೆಯ ಬೆಲೆಗೆ ಮಾರಾಟವಾಗು ಮೂಲಕ ನಿರ್ಮಾಪಕರಿಗೆ ವ್ಯವಹಾರದ ಹೊಸ ಬಾಗಿಲು ತೆರೆದಿದೆ. ಈಗಾಗಲೇ ಅನೇಕ ಕನ್ನಡ ಚಿತ್ರಗಳ ಡಬ್ಬಿಂಗ್‌ ಹಕ್ಕುಗಳು ಮಾರಾಟವಾಗಿದ್ದು, ಆ ಸಾಲಿಗೆ ಹೊಸ ಸೇರ್ಪಡೆ “ಬಜಾರ್‌’. ಸುನಿ ನಿರ್ದೇಶನದ “ಬಜಾರ್‌’ ಚಿತ್ರದ ಡಬ್ಬಿಂಗ್‌ ರೈಟ್ಸ್‌ ಹಿಂದಿಗೆ ಒಂದು ಕೋಟಿ ಎರಡು ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಒಬ್ಬ ಹೊಸ ಹುಡುಗನ ಮೊದಲ ಚಿತ್ರಕ್ಕೆ ಈ ಮೊತ್ತ ಸಿಕ್ಕಿರುವುದರಿಂದ ಚಿತ್ರತಂಡ ಖುಷಿಯಾಗಿದೆ. ಆದಿತ್ಯ ಎನ್ನುವವರು ಹಿಂದಿ ಡಬ್ಬಿಂಗ್‌ ಹಕ್ಕನ್ನು ಖರೀದಿಸಿದ್ದಾರೆ. ಚಿತ್ರದಲ್ಲಿ ಆರು ಫೈಟ್‌ಗಳಿದ್ದು, ಮಾಸ್‌ ಪ್ರಿಯರು ಇಷ್ಟಪಡುತ್ತಾರೆ ಎನ್ನುವ ವಿಶ್ವಾಸ ಸುನಿಗಿದೆ. ಈಗಾಗಲೇ ಚಿತ್ರದ ಹಾಡುಗಳನ್ನು ದರ್ಶನ್‌ ಬಿಡುಗಡೆ ಮಾಡಿದ್ದು, ಹಾಡುಗಳಿಗೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. “ಬಜಾರ್‌’ ಚಿತ್ರದ ಮೂಲಕ ಧನ್ವೀರ್‌ ಲಾಂಚ್‌ ಆಗುತ್ತಿದ್ದಾರೆ.

ಚಿತ್ರದ ಹಾಡು ಹಾಗೂ ಫೈಟ್‌ಗಾಗಿ ಧನ್ವೀರ್‌ ದೇಹ ದಂಡಿಸಿ ಸಿಕ್ಸ್‌ಪ್ಯಾಕ್‌ ಮಾಡಿ, ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮೊದಲ ಚಿತ್ರದಲ್ಲೇ ಭರ್ಜರಿಯಾಗಿ ಎಂಟ್ರಿಕೊಡಲು ಧನ್ವೀರ್‌ ರೆಡಿಯಾಗಿದ್ದಾರೆ. ಇಲ್ಲಿ ಲವ್‌ಸ್ಟೋರಿ ಜೊತೆಗೆ ಪಾರಿವಾಳ ರೇಸ್‌ ಕೂಡಾ ಈ ಚಿತ್ರದ ಹೈಲೈಟ್‌. ಪಾರಿವಾಳ ರೇಸ್‌ ಅನ್ನು ಮೂಲವಾಗಿಟ್ಟುಕೊಂಡು “ಬಜಾರ್‌’ ಚಿತ್ರದ ಕಥೆ ಸಾಗಿದೆ.

ಚಿತ್ರದ ಬಗ್ಗೆ ಮಾತನಾಡುವ ಸುನಿ, “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ.  ಕಮರ್ಷಿಯಲ್‌ ಆಗಿ ಏನೇನು ಬೇಕೋ, ಅವೆಲ್ಲವನ್ನು ಸೇರಿಸಿದ್ದೇವೆ. ಈಗ ಡಬ್ಬಿಂಗ್‌ ರೈಟ್ಸ್‌ ಕೂಡಾ ಒಳ್ಳೆಯ ಬೆಲೆಗೆ ಮಾರಾಟವಾಗಿದೆ. ಈ ಸಿನಿಮಾ ಪಾರಿವಾಳ ರೇಸ್‌ ಜೊತೆಗೆ ಸಾಗುತ್ತದೆ. ಸುಮಾರು 500ಕ್ಕೂ ಹೆಚ್ಚು ಪಾರಿವಾಳಗಳಿರುವ ಪ್ರಕಾಶ್‌ ನಗರ ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ.

ಈ ಚಿತ್ರದಲ್ಲಿ ರೇಸ್‌ ಜೊತೆಗೆ ರೌಡಿಸಂ, ಲವ್‌ ಕೂಡಾ ಇದೆ. ಧನ್ವೀರ್‌ ತುಂಬಾ ಚೆನ್ನಾಗಿ ನಟಿಸಿದ್ದು, ಮುಂದೆ ಚಿತ್ರರಂಗದಲ್ಲಿ ನೆಲೆ ನಿಲ್ಲುತ್ತಾರೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ ಸುನಿ. “ಬಜಾರ್‌’ ಚಿತ್ರವನ್ನು ಭಾರತಿ ಫಿಲಂ ಪ್ರೊಡಕ್ಷನ್ಸ್‌ನಡಿ ತಿಮ್ಮೇಗೌಡ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಸಂತೋಷ್‌ ರೈ ಪಾತಾಜೆ ಅವರ ಛಾಯಾಗ್ರಹಣವಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಚಿತ್ರ ಅಕ್ಟೋಬರ್‌ನಲ್ಲಿ ತೆರೆಕಾಣಲಿದೆ. 

ಟಾಪ್ ನ್ಯೂಸ್

Crickter-johonsan

Bengaluru: ಕಟ್ಟಡದಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್‌ ಜಾನ್ಸನ್‌ ಆತ್ಮಹತ್ಯೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

1-vj

MLC Ticket; ಕಾಂಗ್ರೆಸ್ ವರಿಷ್ಠರು ಭರವಸೆ ಈಡೇರಿಸುವ ವಿಶ್ವಾಸವಿದೆ:ಗಣಿಹಾರ

1-v-dsadsa-d

Hooch tragedy ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಕ್ಕೆ ಸ್ಪಷ್ಟ ಸಾಕ್ಷಿ: ಅಣ್ಣಾಮಲೈ

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

sambhavami yuge yuge movie trailer

Sandalwood; ಸದ್ದು ಮಾಡುತ್ತಿದೆ “ಸಂಭವಾಮಿ ಯುಗೇ ಯುಗೇ’ ಟ್ರೇಲರ್

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

MUST WATCH

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

udayavani youtube

ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

ಹೊಸ ಸೇರ್ಪಡೆ

Crickter-johonsan

Bengaluru: ಕಟ್ಟಡದಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್‌ ಜಾನ್ಸನ್‌ ಆತ್ಮಹತ್ಯೆ

Mang-Airport

Mangaluru ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

Hajj:ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್‌ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ

1-gg

CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

1-ml

Ullal; ಯುವಮೋರ್ಚ ಮಂಡಲ ಅಧ್ಯಕ್ಷನ ಎಳೆದಾಡಿದ ಠಾಣಾಧಿಕಾರಿ: ಕಾರ್ಯಕರ್ತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.