ಮಾ.15ಕ್ಕೆ ಭಜರಂಗಿ 2 ಲಿರಿಕಲ್ ವಿಡಿಯೋ ರಿಲೀಸ್
Team Udayavani, Mar 14, 2021, 8:27 AM IST
ಶಿವರಾಜಕುಮಾರ್ ಅಭಿನಯದ “ಭಜರಂಗಿ’ ಯಶಸ್ಸು ಕಂಡಿದ್ದು ಗೊತ್ತೇ ಇದೆ. ಅದಾದ ಬಳಿಕ “ಭಜರಂಗಿ 2′ ಚಿತ್ರ ಅನೌನ್ಸ್ ಆಗಿದ್ದೂ ಗೊತ್ತು. ಈಗಾಗಲೇ “ಭಜರಂಗಿ 2′ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು, ಚಿತ್ರದ ಬಿಡುಗಡೆ ದಿನಾಂಕ ಕೂಡಾ ಅಂತಿಮವಾಗಿದೆ.
ಮೇ 14ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಮಾರ್ಚ್ 15ರಂದು ಸಂಜೆ ಬಿಡುಗಡೆಯಾಗಲಿದೆ. “ಭಜರೇ ಭಜರೇ ಭಜರಂಗಿ…’ ಎಂಬ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಪ್ರಮೋಶನ್ಗೆ ಅಡಿ ಇಡುತ್ತಿದೆ.
ಇದನ್ನೂ ಓದಿ:ನಟ ರೂಪೇಶ್ ಶೆಟ್ಟಿ ಸಂದರ್ಶನ | ಗಮ್ಜಾಲ್-ಕಮಾಲ್
ಎ.ಹರ್ಷ ನಿರ್ದೇಶನದ ಈ ಚಿತ್ರವನ್ನು ಜಯಣ್ಣ ಮತ್ತು ಭೋಗೇಂದ್ರ ನಿರ್ಮಾಣ ಮಾಡುತ್ತಿದ್ದಾರೆ. “ಭಜರಂಗಿ’ ಕ®ಡ ° ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಪಡೆದಿತ್ತು. ಅದೇ ಯಶಸ್ಸಿನ ಬಳಿಕ ನಿರ್ದೇಶಕ ಹರ್ಷ ಅವರು “ಭಜರಂಗಿ 2′ ಮಾಡುತ್ತಿದ್ದಾರೆ.
ಈಗಾಗಲೇ ಚಿತ್ರದ ಪೋಸ್ಟರ್, ಟೀಸರ್ ನೋಡಿದವರಿಗೆ ಇಲ್ಲೂ ಹೊಸದೊಂದು ಕಥೆ ಬಿಚ್ಚಿಕೊಳ್ಳುವ ನಿರೀಕ್ಷೆ ಹೆಚ್ಚಿದೆ. ಅದೇನೆ ಇರಲಿ, “ಭಜರಂಗಿ’ ಮೂಲಕ ಶಿವರಾಜಕುಮಾರ್ ಹೊಸ ವಿಷಯ ಹೇಳಿದ್ದರು. ಈ ಬಾರಿ “ಭಜರಂಗಿ 2′ ಮೂಲಕವೂ ಹೊಸತನ ಕಟ್ಟಿಕೊಡುತ್ತಾರೆ ಎಂಬ ನಂಬಿಕೆ ಅವರ ಅಭಿಮಾನಿಗಳಲ್ಲಿದೆ.
ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತವಿದೆ. ಸ್ವಾಮಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ದೀಪು ಎಸ್.ಕುಮಾರ್ ಸಂಕಲನ ಮಾಡಿದರೆ, ರವಿ ಸಂತೆಹೈಕ್ಲು ಕಲಾನಿರ್ದೇಶನವಿದೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ