ಹಸೆಮಣೆ ಏರೋದಕ್ಕೆ ರೆಡಿಯಾದ ಭಾಮಾ

ಉದ್ಯಮಿ ಅರುಣ್‌ ಜೊತೆ ನಿಶ್ಚಿತಾರ್ಥ

Team Udayavani, Jan 23, 2020, 7:04 AM IST

ಕನ್ನಡ, ಮಲಯಾಳಂ, ತಮಿಳು ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಮಿಂಚಿರುವ ಭಾಮಾ ಶೀಘ್ರದಲ್ಲಿಯೇ ಹಸೆಮಣೆ ಏರಲಿದ್ದಾರೆ. ಕೇರಳದ ಮೂಲದ ಭಾಮಾ ತಮ್ಮ ಬಾಲ್ಯದ ಸಹಪಾಠಿ ಅರುಣ್‌ ಅವರನ್ನು ವರಿಸಲಿದ್ದು, ಮಂಗಳವಾರ (ಜ. 21ರಂದು) ಕೊಚ್ಚಿಯ ಖಾಸಗಿ ರೆಸಾರ್ಟ್‌ನಲ್ಲಿ ಭಾಮಾ ಮತ್ತು ಅರುಣ್‌ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ.

ಭಾಮಾ ಮತ್ತು ಅರುಣ್‌ ಇಬ್ಬರೂ ಬಾಲ್ಯದಿಂದಲೂ ಸಹಪಾಠಿಗಳಾಗಿದ್ದು, ಎರಡೂ ಕುಟುಂಬದ ಸಮ್ಮತಿಯಿಂದ ಈ ಮದುವೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನು ಕೇರಳದ ಕೊಚ್ಚಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೇವಲ ಎರಡೂ ಕುಟುಂಬದ ಸದಸ್ಯರು, ಆತ್ಮೀಯ ಸ್ನೇಹಿತರಷ್ಟೇ ಭಾಗವಹಿಸಿದ್ದರು. ಭಾಮಾ ಕೈಹಿಡಿಯುತ್ತಿರುವ ಅರುಣ್‌ ಕೇರಳದ ಚೆನ್ನಿಥಾಲದ ಆಲಪ್ಪುಳದ ಮೂಲದವರಾಗಿದ್ದು, ಕೆನೆಡಾದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದಾರೆ.

ನಟ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ “ಮೊದಲಾಸಲ’ ಚಿತ್ರದ ಮೂಲಕ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಭಾಮಾ ನಂತರ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ “ಶೈಲೂ’, “ಆಟೋರಾಜ’, ನಟ ಲೂಸ್‌ಮಾದ ಯೋಗಿ ಅಭಿನಯದ “ಅಂಬರ’, ಪ್ರಜ್ವಲ್‌ ದೇವರಾಜ್‌ ಅಭಿನಯದ “ಅರ್ಜುನ’, ದಿಗಂತ್‌ ಅಭಿನಯದ “ಬರ್ಫಿ’ ಹೀಗೆ ಹಲವು ಚಿತ್ರಗಳಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದರು.

ತನ್ನ ಸೌಂದರ್ಯ ಮತ್ತು ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾದ ಭಾಮಾ ಕಳೆದ ಎರಡು-ಮೂರು ವರ್ಷಗಳಿಂದ ಸ್ಯಾಂಡಲ್‌ವುಡ್‌ನ‌ಲ್ಲಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಜನವರಿ ತಿಂಗಳ ಕೊನೆಗೆ ಭಾಮಾ – ಅರುಣ್‌ ದಾಂಪತ್ಯ ಕಾಲಿಡಲಿದ್ದು, ಮದುವೆ ಆರತಕ್ಷತೆ ಕಾರ್ಯಕ್ರಮ ಕೊಚ್ಚಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಹಲವರು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ