ಶಿವಣ್ಣನ ಭಜರಂಗಿ-2 ದರ್ಶನ ಸದ್ಯಕ್ಕಿಲ್ಲ : ರಿಲೀಸ್ ಡೇಟ್ ಮುಂದಕ್ಕೆ


Team Udayavani, Sep 1, 2021, 9:18 AM IST

gdghdghfss

ಕೋವಿಡ್‌ ಎರಡನೇ ಅಲೆಯ ಆತಂಕಕೊಂಚ ಮಟ್ಟಿಗೆ ಕಡಿಮೆಯಾಗುತ್ತಿದ್ದಂತೆ,  ಕನ್ನಡದಲ್ಲಿ ಬ್ಯಾಕ್‌ ಟು ಬ್ಯಾಕ್‌ ಸ್ಟಾರ್ ಸಿನಿಮಾಗಳು ತೆರೆಗೆ ಬರಲು ಪ್ಲಾನ್‌ ಮಾಡಿಕೊಳ್ಳುತ್ತಿವೆ. ಅದರಲ್ಲೂ ಎರಡನೇ ಲಾಕ್‌ಡೌನ್‌ ಬಳಿಕ ಹ್ಯಾಟ್ರಿಕ್‌ ಹೀರೊ ಶಿವರಾಜಕುಮಾರ್‌ ಅಭಿನಯದ “ಭಜರಂಗಿ-2′ ಮೊದಲ ಸ್ಟಾರ್‌ ಸಿನಿಮಾವಾಗಿ ತೆರೆಗೆ ಬರುತ್ತಿದ್ದು, ಇದೇ ಸೆ.1ರಂದು ಟ್ರೇಲರ್‌ ಬಿಡುಗಡೆ ಮಾಡಿ, ಸೆ. 10 ರಂದು “ಭಜರಂಗಿ-2’ನ್ನು ಅದ್ಧೂರಿಯಾಗಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿತ್ತು.

ಬಹುಸಮಯದ ನಂತರ ತಮ್ಮ ನೆಚ್ಚಿನ ನಟನ ಸಿನಿಮಾವನ್ನ ತೆರೆಮೇಲೆಕಣ್ತುಂಬಿಕೊಳ್ಳಲು ಶಿವಣ್ಣನ ಫ್ಯಾನ್ಸ್‌ ಕೂಡ ಕಾತುರದಿಂದ ಕಾಯುತ್ತಿದ್ದರು. ಸೋಶಿಯಲ್‌ ಮೀಡಿಯಾದಲ್ಲೂ “ಭಜರಂಗಿ-2′ ಹವಾ ಜೋರಾಗುತ್ತಿತ್ತು. ಇನ್ನೇನು ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ “ಭಜರಂಗಿ-2′ ದರ್ಶನಕ್ಕಾಗಿ ಕಾಯುತ್ತಿದ್ದ ಶಿವಣ್ಣ ಫ್ಯಾನ್ಸ್‌ಗೆ ಮತ್ತೂಮ್ಮೆ ನಿರಾಸೆಯಾಗಿದೆ.

ಕೊರೊನಾ ಭೀತಿಯಿಂದ “ಭಜರಂಗಿ-2′ ಬಿಡುಗಡೆಗೆ ಮತ್ತೂಮ್ಮೆ ಬ್ರೇಕ್‌ ಬಿದ್ದಿದೆ. ಹೌದು, ಇದೇ ಸೆ. 1ರಂದು “ಭಜರಂಗಿ-2′ ಟ್ರೇಲರ್‌ ಬಿಡುಗಡೆಯಾಗಿ, ಸೆ.10ಕ್ಕೆ ಸಿನಿಮಾ ಬಿಡುಗಡೆಯಾಗಬೇಕಿತ್ತು. ಕಳೆದಕೆಲ ದಿನಗಳಿಂದ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿರುವುದರಿಂದ, “ಭಜರಂಗಿ-2′ ಬಿಡುಗಡೆಯನ್ನು ಮತ್ತೂಮ್ಮೆ ಚಿತ್ರತಂಡ ಅನಿರ್ಧಿಷ್ಟಾವಧಿಗೆ ಮುಂದೂಡಿದೆ.

ಇನ್ನು ಈ ವಿಷಯವನ್ನು ಸ್ವತಃ ನಟ ಶಿವರಾಜಕುಮಾರ್‌ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. “ಸೆ.1ರಂದು ನಮ್ಮ ಸಿನಿಮಾದ ಟ್ರೇಲರ್‌ ರಿಲೀಸ್‌ ಮತ್ತು ಸೆ.10ಕ್ಕೆ ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದರೆ ಅದು ಈಗ ಸಾಧ್ಯವಾಗ್ತಿಲ್ಲ.ಕೊರೊನಾ ಕೇಸ್‌ಗಳು ಜಾಸ್ತಿ ಆಗುತ್ತಿದ್ದು, ಜೊತೆಗೆ ವೀಕೆಂಡ್‌ ಲಾಕ್‌ ಡೌನ್‌ ಮತ್ತು ನೈಟ್‌ಕರ್ಫ್ಯೂ ಇರೋದ್ರಿಂದ, ಈ ಸಮಯದಲ್ಲಿ ಸಿನಿಮಾ ರಿಲೀಸ್‌ ಮಾಡುವುದು ನಿರ್ಮಾಪಕರ ದೃಯಿಂದ ಒಳ್ಳೆಯದಲ್ಲ. ಹಾಗಾಗಿ ಸದ್ಯಕ್ಕೆ “ಭಜರಂಗಿ-2′ ರಿಲೀಸ್‌ ಆಗುತ್ತಿಲ್ಲ’ ಎಂದು ಶಿವರಾಜಕುಮಾರ್‌ ಹೇಳಿದ್ದಾರೆ.

ರಿಲೀಸ್‌ ಮುಂದೂಡಿರುವುದಕ್ಕೆ ಕಮೆಯಾಚಿಸಿದ್ದ ಶಿವಣ್ಣ ತಮ್ಮ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡದ ಈ ನಿರ್ಧಾರ ನಿರಾಸೆ ತಂದಿದ್ದು, ಈ ಬಗ್ಗೆ ಶಿವಣ್ಣ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಅಡೆತಡೆಗಳು ಬಂದರೂ, ಸೆಟ್ಟೇರಿದಾಗಿನಿಂದಲೂ ಆಂಜನೇಯ ಸ್ವಾಮಿಕೃಪೆಯಿಂದ ಈ ಸಿನಿಮಾವನ್ನು ಮುನ್ನೆಡೆಸಿಕೊಂಡು ಹೋಗುತ್ತಿದ್ದೇವೆ. ನಾವು ಪಟ್ಟ ಕಷ್ಟವನ್ನು ನೀವು ಅನುಭವಿಸಬಾರದು. ನೀವು ಆರಾಮಾಗಿ ಬಂದು ಸಿನಿಮಾ ನೋಡಬೇಕು. ನಾವು ಪಟ್ಟಿರುವ ಕಷ್ಟಕ್ಕೆ ನೀವು ಪ್ರತಿಫ‌ಲ ನೀಡುತ್ತೀರಿ ಎಂಬ ಭರವಸೆ ಇದೆ. ಸಿನಿಮಾ ರಿಲೀಸ್‌ ಡೇಟ್‌ ಮುಂದೂಡಿರುವುದಕ್ಕೆ ಇಡೀ ತಂಡದ ಪರವಾಗಿ ಕ್ಷಮೆಕೇಳುತ್ತೇನೆ’ ಎಂದಿದ್ದಾರೆ ಶಿವರಾಜಕುಮಾರ್‌.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.