ಪ್ರಜ್ವಲ್‌ಗೆ ಭಾವನಾ ನಾಯಕಿ 


Team Udayavani, Jan 28, 2018, 10:19 AM IST

Bhavana.jpg

ನಟಿಯರು ಮದುವೆಯಾದ ನಂತರ ಕೇಳಲಾಗುವ ಮೊದಲ ಪ್ರಶ್ನೆ ಎಂದರೆ, “ಮುಂದೆ ನೀವು ನಟಿಸುತ್ತೀರಾ’ ಎಂಬುದು. ಅನೇಕ ನಟಿಯರಿಗೆ ಈ ಪ್ರಶ್ನೆ ಕಿರಿಕಿರಿಯುಂಟು ಮಾಡೋದು ಸುಳ್ಳಲ್ಲ. ಆದರೆ, ಮೊನ್ನೆ ಮೊನ್ನೆಯಷ್ಟೇ ಹಸೆಮಣೆ ಏರಿದ ಭಾವನಾಗೆ ಆ ಪ್ರಶ್ನೆ ಎದುರಾಗುಷ್ಟರಲ್ಲಿ ಅವರೇ ಉತ್ತರಿಸಿದ್ದಾರೆ. ಅದು ಹೊಸ ಸಿನಿಮಾವೊಂದನ್ನು ಒಪ್ಪಿಕೊಳ್ಳುವ ಮೂಲಕ.

ಹೌದು, ನಟಿ ಭಾವನಾ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು ಪ್ರಜ್ವಲ್‌ ದೇವರಾಜ್‌ ನಾಯಕರಾಗಿರುವ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ. ಕೆಲ ದಿನಗಳ ಹಿಂದಷ್ಟೇ ಪ್ರಜ್ವಲ್‌ “ಇನ್ಸ್‌ಪೆಕ್ಟರ್‌ ವಿಕ್ರಂ’ ಎಂಬ ಸಿನಿಮಾ ಮಾಡುತ್ತಿರುವ ವಿಷಯವನ್ನು ನೀವು ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಆಗ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿರಲಿಲ್ಲ. ಈಗ ಚಿತ್ರದಲ್ಲಿ ಭಾವನಾ ನಾಯಕಿಯಾಗಿರುವ ಸುದ್ದಿ ಬಂದಿದೆ.

ಸಾಮಾನ್ಯವಾಗಿ ನಟಿಯರು ಮದುವೆಯಾಗಿ ಒಂದು ವರ್ಷದವರೆಗೆ ಅವರ ಹೊಸ ಸಿನಿಮಾದ ಸುದ್ದಿಗಳು ಬರೋದು ಕಡಿಮೆ. ಆದರೆ, ಭಾವನಾ ಮದುವೆಯಾಗಿ ಒಂದು ವಾರ ಆಗುವಷ್ಟರಲ್ಲೇ ಅವರ ಹೊಸ ಸಿನಿಮಾದ ಸುದ್ದಿ ಹೊರಬಿದ್ದಿದೆ. ಪ್ರಜ್ವಲ್‌ ಅವರ 30ನೇ ಚಿತ್ರ ಇದಾಗಿದ್ದು, “ಪುಷ್ಪಕ ವಿಮಾನ’ ನಿರ್ಮಿಸಿದ್ದ ವಿಖ್ಯಾತ್‌ ನಿರ್ಮಾಣ ಮಾಡುತ್ತಿದ್ದಾರೆ. ನರಸಿಂಹ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ.

ಪ್ರಜ್ವಲ್‌ ದೇವರಾಜ್‌ ಅವರಿಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತುಂಬಾ ಸ್ಟೈಲಿಶ್‌ ಪಾತ್ರ ಕಟ್ಟಿಕೊಟ್ಟಿರುವ ನಿರ್ದೇಶಕರು, ಕ್ಲಾಸ್‌ ಜೊತೆಗೆ ಮಾಸ್‌ ಅಂಶಗಳೊಂದಿಗೆ ಈ ಸಿನಿಮಾ ಮಾಡುತ್ತಿದ್ದಾರಂತೆ. ಇನ್ನು, ಚಿತ್ರದಲ್ಲಿ ಭಾವನಾ ಅವರು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ನಮ್ಮ ಚಿತ್ರದ ನಾಯಕಿಯ ಪಾತ್ರಕ್ಕೆ ಬ್ಯೂಟಿ ಹಾಗೂ ಪರ್‌ಫಾರ್ಮೆನ್ಸ್‌ನ ನಟಿ ಬೇಕಿತ್ತು.

ಹಾಗಾಗಿ, ಭಾವನಾ ಅವರನ್ನು ಕೇಳಿದೆವು. ಕಥೆ ಹಾಗೂ ಅವರ ಪಾತ್ರ ಕೇಳಿ ಒಪ್ಪಿಕೊಂಡರು’ ಎಂದು ತಮ್ಮ ಸಿನಿಮಾ ಬಗ್ಗೆ ಹೇಳುತ್ತಾರೆ ವಿಖ್ಯಾತ್‌. ಹೇಳುತ್ತಾರೆ ನಿರ್ಮಾಪಕ ವಿಖ್ಯಾತ್‌. ಸೋಮವಾರದಿಂದ ಚಿತ್ರೀಕರಣ ಆರಂಭವಾಗಲಿದ್ದು, ಫೆಬ್ರವರಿ 7 ರಿಂದ ಭಾವನಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.