ಹೊಸಬರ ಬಿಟ್ಟಿ ಬಿಲ್ಡಪ್‌!

Team Udayavani, Oct 25, 2017, 10:25 AM IST

ಕನ್ನಡದಲ್ಲಿ ತರಹೇವಾರಿ ಶೀರ್ಷಿಕೆಯುಳ್ಳ ಚಿತ್ರಗಳು ಬರುತ್ತಿವೆ. ಅದಕ್ಕೆ ತಕ್ಕಂತಹ ಕಥೆಗಳನ್ನೂ ಹೊತ್ತು ತರುತ್ತಿವೆ. ಈಗ ಆ ಸಾಲಿಗೆ “3 ಗಂಟೆ 30 ದಿನ 30 ಸೆಕೆಂಡ್‌’ ಚಿತ್ರವೂ ಸೇರಿದೆ. ಇತ್ತೀಚೆಗಷ್ಟೇ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಿದ ಚಿತ್ರತಂಡ ಖುಷಿಯಾಗಿದೆ.

ಅದಕ್ಕೆ ಕಾರಣ, ಆಡಿಯೋ ಬಿಡುಗಡೆಯಾದ ಕೇವಲ ಮೂರೇ ದಿನದಲ್ಲಿ ಸುಮಾರು 70 ಸಾವಿರ ಮಂದಿ ಹಾಡುಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಆ ಚಿತ್ರದ “ಬಿಟ್ಟಿ ಬಿಲ್ಡಪ್‌ ಮಾಡಬೇಡ …’ ಎಂಬ ಹಾಡಿಗೆ ಹೆಚ್ಚು ಮೆಚ್ಚುಗೆ ವ್ಯಕ್ತವಾಗಿದೆ. “ಕಾಸ್ಟ್ಲಿ ವಾಚು ಕೈಲಿದ್ರೂ ಟೈಮು ನಿಲ್ಸೊಕ್‌ ಆಗೋಲ್ಲ..’ ಎಂಬ ಸಾಹಿತ್ಯ ಹೊಂದಿರುವ ಈ ಹಾಡಿಗೆ ಟಿಪ್ಪು ದನಿಯಾಗಿದ್ದಾರೆ. 

ಈ ಹಾಡಿನ ಇನ್ನೊಂದು ವಿಶೇಷವೆಂದರೆ, ಈಗಾಗಲೇ ಈ ಹಾಡು ವೀಕ್ಷಿಸಿರುವ ವಿದ್ಯಾರ್ಥಿಗಳು ಮತ್ತು ಮಕ್ಕಳು ಈ ಹಾಡಿಗೆ ಹೆಜ್ಜೆ ಹಾಕಿ, ವೀಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಅಪ್‌ಲೋಡ್‌ ಮಾಡುತ್ತಿದ್ದಾರೆ. ಆ ವೀಡಿಯೋ ಕೂಡ ವೈರಲ್‌ ಆಗಿರುವುದು ವಿಶೇಷತೆಗಳಲ್ಲೊಂದು. ನಿರ್ದೇಶಕ ಮಧುಸೂದನ್‌ ಅವರು ಹೊಸದೊಂದು ಆಲೋಚನೆ ಮಾಡಿದ್ದಾರೆ.

ಅದೇನೆಂದರೆ, ಅಭಿಮಾನಿಗಳು ಮಾಡಿದ ಹಾಡನ್ನು ಚಿತ್ರದಲ್ಲಿ ಬಳಸಿಕೊಂಡರೆ ಹೇಗೆ ಎಂಬ ಬಗ್ಗೆ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ಅರಿ ಹೆಚ್ಚು ಸೃಜನಶೀಲವಾಗಿರುವ ಹಾಡಿಗೆ ಉತ್ತಮ ಬಹುಮಾನ ನೀಡಲು ನಿರ್ದೇಶಕರು ನಿರ್ಧರಿಸಿದ್ದಾರೆ. ಬ್ರೈನ್‌ಶೇರ್‌ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಜಿ.ಕೆ.ಮಧುಸೂದನ್‌ ಮೊದಲ ಸಲ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಚಂದ್ರಶೇಖರ್‌ ಆರ್‌.ಪದ್ಮಶಾಲಿ ಮತ್ತು ಗೆಳೆಯರು ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಜಯಂತ್‌ ಕಾಯ್ಕಿಣಿ ಒಂದು ಹಾಡು ಬರೆದಿದ್ದಾರೆ. ಮಿಕ್ಕಂತೆ ನಿರ್ದೇಶಕರು ಹಾಡುಗಳನ್ನು ರಚಿಸಿದ್ದಾರೆ. ಶ್ರೀಧರ್‌ ವಿ.ಸಂಭ್ರಮ್‌ ಇಲ್ಲಿ ಸಂಗೀತದ ಜತೆಗೆ ಒಂದು ಹಾಡನ್ನು ಮೊದಲ ಬಾರಿಗೆ ಹಾಡಿದ್ದಾರೆ. ಅರುಗೌಡ, ಕಾವ್ಯಾಶೆಟ್ಟಿ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಸುಧಾರಾಣಿ, ದೇವರಾಜ್‌ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ನವೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....