ಮಂಡ್ಯ ಹುಡುಗಿಯಾದ ಬೃಂದಾ ಆಚಾರ್ಯ

Team Udayavani, May 15, 2023, 10:53 AM IST

brinda acharya in new movie reethu

ನಟಿ ಬೃಂದಾ ಆಚಾರ್ಯ ಈಗ ಮಹಿಳಾ ಪ್ರಧಾನ ಸಿನಿಮಾ ಸಿನಿಮಾವೊಂದರ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದೆ. ಹೌದು, “ರೀತು’ ಎಂಬ ಸಿನಿಮಾದಲ್ಲಿ ಬೃಂದಾ ಆಚಾರ್ಯ ನಾಯಕಿಯಾಗಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ಈಗಾಗಲೇ ಸದ್ದಿಲ್ಲದೆ ಪ್ರೀ-ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿರುವ ಈ ಸಿನಿಮಾ ಇದೀಗ ಸೆಟ್ಟೇರಿದೆ.

ಮಂಡ್ಯದಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಬೃಂದಾ ಆಚಾರ್ಯ ಮಂಡ್ಯ ಹುಡುಗಿಯ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ “ಜನರಕ್ಷಕ’, “ಅಮೂಲ್ಯ’ ಎಂಬ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕಿ ಗೌರಿಶ್ರೀ “ರೀತು’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ವಿ 2 ಪ್ರೊಡಕ್ಷನ್ಸ್‌’ ಬ್ಯಾನರಿನಲ್ಲಿ ಆನಂದ ಹಲಗಪ್ಪ, ಹೇಮಂತ್‌ ಹೆಚ್‌. ಕೆ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಮುಹೂರ್ತದ ಬಳಿಕ “ರೀತು’ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕಿ ಗೌರಿಶ್ರೀ, “ಮಂಡ್ಯದಲ್ಲಿ ಕೆಲ ವರ್ಷಗಳ ಹಿಂದೆ ನಡೆದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ಮಾಡುತ್ತಿದ್ದೇವೆ. ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ತನ್ನ ಕುಟುಂಬದಲ್ಲಿ ಹಾಯಾಗಿದ್ದ ಮುದ್ದು ಮುಖದ, ಮುಗ್ಧ ಹುಡುಗಿಯೊಬ್ಬಳ ಜೀವನ ಮದುವೆಯ ನಂತರ ಹೇಗೆ ಅನಿರೀಕ್ಷಿತ ತಿರುವುಗಳನ್ನು ಪಡೆದುಕೊಂಡು ಬದಲಾಗುತ್ತದೆ. ಅದರಿಂದ ಆಕೆ ಹೇಗೆ ಹೊರಬರುತ್ತಾಳೆ? ಎಂಬುದೇ ಸಿನಿಮಾ ಕಥೆಯ ಎಳೆ’ ಎಂದು ಮಾಹಿತಿ ನೀಡಿದರು.

ಮೊದಲ ಬಾರಿಗೆ ಮಹಿಳಾ ನಿರ್ದೇಶಕರ ಜೊತೆ, ಮಹಿಳಾ ಪ್ರಧಾನ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇದರಲ್ಲಿ ಮಂಡ್ಯ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಕಥೆಯಲ್ಲಿ ತುಂಬ ಎಮೋಶನ್ಸ್‌ ಇದೆ. “ರೀತು’ ಎಲ್ಲರಿಗೂ ಮನಮುಟ್ಟುವಂಥ ಸಿನಿಮಾ ಆಗಲಿದೆ’ ಎಂಬುದು ನಾಯಕಿ ಬೃಂದಾ ಆಚಾರ್ಯ ಮಾತು.

ಇನ್ನು “ರೀತು’ ಸಿನಿಮಾದಲ್ಲಿ ಯುವ ಪ್ರತಿಭೆಗಳಾದ ಆರ್ಯನ್‌, ಪ್ರಫ‌ುಲ್‌ ಸುರೇಂದ್ರ, ಶೋಭರಾಜ್‌, ನಾಗೇಂದ್ರ ಅರಸ್‌, ಲಯ ಕೋಕಿಲ, ಶ್ರೀನಿವಾಸ್‌, ಶಿವಕುಮಾರ ಆರಾಧ್ಯ, ಸಂತ ನಟರಾಜ್‌, ಜಾಹ್ನವಿ, ತೇಜಸ್ವಿನಿ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾದ ಐದು ಹಾಡುಗಳಿಗೆ ಹೇಮಂತ್‌ ಸಂಗೀತ ಸಂಯೋಜಿಸುತ್ತಿದ್ದು, ಸಂದೀಪ್‌ ಹೊನ್ನಳ್ಳಿ ಛಾಯಾಗ್ರಹ ವಿದೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡಿರುವ “ರೀತು’ ಚಿತ್ರತಂಡ, ಬೆಂಗಳೂರು, ಊಟಿ, ಮೈಸೂರು, ಮಡಿಕೇರಿ, ಮಂಡ್ಯ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಸುವ ಯೋಜನೆ ಹಾಕಿಕೊಂಡಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್‌ ವೇಳೆಗೆ “ರೀತು’ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.