ಔಟ್ & ಔಟ್ ಆ್ಯಕ್ಷನ್ ಬಂಪರ್ ಹಿಟ್
Team Udayavani, Sep 9, 2020, 2:28 PM IST
ಯುವನಟ ಧನ್ವೀರ್ ಅಭಿನಯದ “ಬಂಪರ್’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದೆ. “ಬಹದ್ದೂರ್’ ಚೇತನ್ ಕುಮಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗು ಸಾಹಿತ್ಯ ಬರೆಯುತ್ತಿದ್ದಾರೆ. ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಹೊಣೆ ವಹಿಸಿಕೊಂಡಿದ್ದಾರೆ.
ಸುಪ್ರೀತ್ ಮತ್ತು ನಿಶಾ ವೆಂಕಟ್ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ “ಬಂಪರ್’ ಚಿತ್ರದ ಬಹುತೇಕ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ತಿಂಗಳಾಂತ್ಯಕ್ಕೆ ಬೆಂಗಳೂರು, ಮೈಸೂರು ಸುತ್ತಮುತ್ತ ಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. “ಬಂಪರ್’ ಚಿತ್ರದ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದು, ನವೀನ್ ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಫೈಟ್ ಮಾಸ್ಟರ್ ವಿಕ್ರಂ ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿದ್ದಾರೆ. ಇನ್ನು “ಬಂಪರ್’ ಟೀಸರ್ ಬಿಡುಗಡೆಯಾಗುತ್ತಿದ್ದಂತೆ, ಸೋಶಿಯಲ್ಮೀಡಿಯಾಗಳಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಈಗಾಗಲೇ ಟೀಸರ್ 11 ಮಿಲಿಯನ್ ವೀವ್ಸ್ ಪಡೆದುಕೊಂಡಿದೆ.