ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಪ್ರಶಾಂತ್ ಸಂಬರಗಿಗೆ ನೋಟಿಸ್ ನೀಡಿದ ಸಿಸಿಬಿ
Team Udayavani, Sep 11, 2020, 3:18 PM IST
ಬೆಂಗಳೂರು: ರಾಜ್ಯದಲ್ಲಿ ಭಾರಿ ಸುದ್ದಿಯಲ್ಲಿರುವ ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಚಿತ್ರ ವಿತರಕ ಪ್ರಶಾಂತ್ ಸಂಬರಗಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಶಾಂತ್ ಸಂಬರಗಿಗೆ ಶನಿವಾರ ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವಂತೆ ನೋಟಿಸ್ ನೀಡಲಾಗಿದೆ. ಬಂದ ನಂತರ ಅವರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
ಡ್ರಗ್ ಮಾಫಿಯಾಗೂ ಸ್ಯಾಂಡಲ್ ವುಡ್ ಗೂ ಇರುವ ಸಂಪರ್ಕಗಳ ಬಗ್ಗೆ ಪ್ರಶಾಂತ್ ಸಂಬರಗಿಯವರು ಮಾಧ್ಯಮಗಳ ಮುಂದೆ ಹಲವಾರು ಆರೋಪಗಳನ್ನು ಮಾಡಿದ್ದರು. ಸದ್ಯ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಮತ್ತು ಸಂಬರಗಿ ನಡುವೆ ಹಲವಾರು ಆರೋಪ -ಪ್ರತ್ಯಾರೋಪಗಳು ನಡೆದಿದ್ದವು.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಶೆ ನಂಟು: ರಾಗಿಣಿ ಜಾಮೀನು ಅರ್ಜಿ ಮುಂದೂಡಿದ ಕೋರ್ಟ್
ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧವೂ ಪ್ರಶಾಂತ್ ಸಂಬರಗಿ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಯಿಸಿರುವ ಜಮಿರ್ ಕಾನೂನು ಕ್ರಮ ಜರಗಿಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ
ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ
ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ