ಸೆನ್ಸಾರ್ ಪಾಸಾದ “ಕೋಟಿಗೊಬ್ಬ 3”
Team Udayavani, Oct 5, 2021, 10:32 PM IST
ಬೆಂಗಳೂರು: ಬಿಡುಗಡೆಗೆ ಸಿದ್ಧವಾಗಿರುವ ಕನ್ನಡದ “ಕೋಟಿಗೊಬ್ಬ 3” ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ಕಿಚ್ಚ ಸುದೀಪ್ ಅಭಿಯನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ.
ಅಕ್ಟೋಬರ್ 14 ರಂದು ಭರ್ಜರಿಯಾಗಿ ಚಿತ್ರಮಂದಿರಗಳಿಗೆ ಲಗ್ಗೆ ಇಡಲು ಸಜ್ಜಾಗಿರುವ “ಕೋಟಿಗೊಬ್ಬ-3” ಚಿತ್ರ ಇದೀಗ ಸೆನ್ಸಾರ್ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರ ವಿಕ್ಷೀಸಿರುವ ಮಂಡಳಿಯ ಸದಸ್ಯರು ಯು/ಎ ಪ್ರಮಾಣ ಪತ್ರ ನೀಡಿದ್ದಾರೆ. ಈ ವಿಷಯವನ್ನು ಕಿಚ್ಚ ಸುದೀಪ್ ಅವರು ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ.
ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಪ್ರೇಕ್ಷಕರ ಮನ ತಣಿಸಲು ಸಿದ್ಧವಾಗಿರುವ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ಅಕ್ಟೋಬರ್ 7 ರಂದು ಬಿಡುಗಡೆಯಾಗುತ್ತಿದೆ.
CENSOR GIVES ” UA “#Kotigobba3RoarsFromOct14 pic.twitter.com/8XsUE1Y69m
— Kichcha Sudeepa (@KicchaSudeep) October 5, 2021
ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿರುವ ಕೋಟಿಗೊಬ್ಬ-3 ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಮಡೋನಾ ಸೆಬಾಸ್ಟಿಯನ್ ನಟಿಸಿದ್ದಾರೆ. ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿ ಶಂಕರ್, ಆಶಿಕಾ ರಂಗನಾಥ್ ಸೇರಿದಂತೆ ದೊಡ್ಡ ತಾರಾ ಬಳಗವನ್ನು ಹೊಂದಿದೆ. ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಮೊದಲ ಬಾರಿಗೆ ಕನ್ನಡಕ್ಕೆ ಬಂದಿದ್ದಾರೆ. ಶಿವದಾಸನಿ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತವಿದೆ.