ಚಿರಂಜೀವಿ ಈಗ ಭೈರವ

Team Udayavani, Feb 24, 2019, 9:53 AM IST

cin-1.jpg

ಜಗ್ಗೇಶ್‌ ಅಭಿನಯದ “ಭೈರವ’ ಚಿತ್ರ ಎಲ್ಲರಿಗೂ ಗೊತ್ತು. 1993 ರಲ್ಲಿ ಬಿಡುಗಡೆಯಾದ “ಭೈರವ’ ಆ ಕಾಲಕ್ಕೆ ಒಳ್ಳೆಯ ಮೆಚ್ಚುಗೆ ಪಡೆದಿತ್ತು. ಎಲ್ಲಾ ಸರಿ, ಈಗ ಯಾಕೆ ಈ “ಭೈರವ’ ವಿಷಯ ಎಂಬ ಪ್ರಶ್ನೆ ಎದುರಾಗಬಹುದು. ಅದಕ್ಕೆ ಕಾರಣ, ಅದೇ ಹೆಸರಿನಲ್ಲಿ ಪುನಃ ಸೆಟ್ಟೇರುತ್ತಿರುವ ಚಿತ್ರ. ಹೌದು, “ಭೈರವ’ ಎಂಬ ಹೆಸರಿನ ಚಿತ್ರಕ್ಕೆ ಇದೀಗ ಎಲ್ಲಾ ತಯಾರಿ ನಡೆಯುತ್ತಿದೆ. ಈ ಚಿತ್ರಕ್ಕೆ ಚಿರಂಜೀವಿ ಸರ್ಜಾ ನಾಯಕರಾಗಿದ್ದಾರೆ.

ಇನ್ನು, “ಧೈರ್ಯಂ’ ನಂತರ ಶಿವತೇಜಸ್‌ ಅವರು ಮತ್ತೂಂದು ಮಾಸ್‌ ಸಿನಿಮಾಗೆ ಕೈ ಹಾಕಿದ್ದಾರೆ. ಈ ಚಿತ್ರವನ್ನು ಶಿವಾರ್ಜುನ್‌ ನಿರ್ಮಾಣ ಮಾಡುತ್ತಿದ್ದಾರೆ. ಇವರಿಗೆ ಇದು ಮೊದಲ ನಿರ್ಮಾಣದ ಚಿತ್ರ. ಶಿವಾರ್ಜುನ್‌ಗೆ ನಿರ್ಮಾಣ ಹೊಸದಾಗಿದ್ದರೂ, ಸಿನಿಮಾ ರಂಗ ಹೊಸದೇನಲ್ಲ. ಸುಮಾರು 25 ವರ್ಷಗಳ ಕಾಲ ಸಿನಿಮಾರಂಗದಲ್ಲಿ ಅವರು ಪ್ರೊಡಕ್ಷನ್‌ ಮ್ಯಾನೇಜರ್‌ ಆಗಿ ಕೆಲಸ ಮಾಡಿದವರು. ಈಗ ನಿರ್ಮಾಣಕ್ಕೆ ಮುಂದಾಗಿದ್ದಾರೆ. “ಧೈರ್ಯಂ’ ನಂತರ ಇನ್ನೊಂದು ಆ್ಯಕ್ಷನ್‌ ಚಿತ್ರ ಮಾಡಬೇಕು ಎಂದು ನಿರ್ಧರಿಸಿದ್ದ ನಿರ್ದೇಶಕ ಶಿವತೇಜಸ್‌, ಚಿರಂಜೀವಿ ಸರ್ಜಾ ಅವರಿಗಾಗಿಯೇ ಮಾಸ್‌ ಕಥೆ ಹೆಣೆದಿದ್ದಾರೆ. ಕಥೆ ಕೇಳಿದ ಚಿರಂಜೀವಿ, ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ಅಂದಹಾಗೆ, “ಭೈರವ’ ಚಿತ್ರದ ಕಥೆ ಏನು? ಇದಕ್ಕೆ ಉತ್ತರಿಸುವ ನಿರ್ದೇಶಕ ಶಿವತೇಜಸ್‌, “ಇದು ಪಕ್ಕಾ ಸ್ವಮೇಕ್‌ ಚಿತ್ರ. ಇಲ್ಲಿ ಭರ್ಜರಿ ಆ್ಯಕ್ಷನ್‌ ಇದೆ. ಫ್ಯಾಮಿಲಿ ಸ್ಟೋರಿ ಹೈಲೈಟ್‌ ಆಗಿರಲಿದೆ. ಜೊತೆಗೆ ಪ್ರೀತಿ, ಸೆಂಟಿಮೆಂಟ್‌, ಹಾಸ್ಯ ಕೂಡ ಹೆಚ್ಚಾಗಿಯೇ ಇರಲಿದೆ. ಎಲ್ಲಾ ವರ್ಗಕ್ಕೂ ಒಂದು ಮಜವೆನಿಸುವ ಚಿತ್ರ ಕೊಡುವ ಉದ್ದೇಶದಿಂದ ಈ ಬಾರಿ ಪಕ್ಕಾ ತಯಾರಿಯೊಂದಿಗೆ ಬರುತ್ತಿದ್ದೇನೆ’ ಎಂಬುದು ನಿರ್ದೇಶಕ ಶಿವತೇಜಸ್‌ ಅವರ ಮಾತು. ಸದ್ಯಕ್ಕೆ ಚಿರಂಜೀವಿ ಸರ್ಜಾ ಚಿತ್ರ ನಾಯಕರಾಗಿ ಪಕ್ಕಾ ಆಗಿದ್ದಾರೆ.

ನಾಯಕಿಯ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಉಳಿದಂತೆ ಚಿತ್ರದಲ್ಲಿ ಸಾಧುಕೋಕಿಲ, ಕುರಿಪ್ರತಾಪ್‌ ಸೇರಿದಂತೆ ಇತರೆ ಕಲಾವಿದರ ದಂಡು ಇಲ್ಲಿರಲಿದೆ. ಎಚ್‌.ಸಿ.ವೇಣು ಛಾಯಾಗ್ರಹಣ ಮಾಡಲಿದ್ದು, ಸಾಧುಕೋಕಿಲ ಅವರ ಪುತ್ರ ಸುರಾಗ್‌ ಚಿತ್ರಕ್ಕೆ ನಾಲ್ಕು ಹಾಡುಗಳಿಗೆ ಸಂಗೀತ ನೀಡಲಿದ್ದಾರೆ. ರವಿವರ್ಮ ಅವರಿಲ್ಲಿ ಐದು ಭರ್ಜರಿ ಫೈಟ್ಸ್‌ಗೆ ಸಾಹಸ ನಿರ್ದೇಶನ ಮಾಡಲಿದ್ದಾರೆ.

ಮೈಸೂರು, ಬೆಳಗಾವಿ ಸೇರಿದಂತೆ ಇತರೆ ಸ್ಥಳಗಳಲ್ಲಿ ಸುಮಾರು 60 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಏಪ್ರಿಲ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ ಎಂಬುದು ನಿರ್ದೇಶಕರ ಮಾತು. 

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.