ಚಿರು ಇಲ್ಲದ ಮೂರು ವರುಷ


Team Udayavani, Jun 7, 2023, 1:45 PM IST

ಚಿರು ಇಲ್ಲದ ಮೂರು ವರುಷ

ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ (ಜೂ.7) ಮೂರು ವರ್ಷ. ಅವರ ಸಾವು ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೊಡೆತ. ಅವರು ಇನ್ನಿಲ್ಲ ಎಂಬುದನ್ನು ಇವತ್ತಿಗೂ ಅರಗಿಸಿಕೊಳ್ಳಲಾಗುತ್ತಿಲ್ಲ. ಹನ್ನೆರೆಡು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿ ಜನಮನ ಗೆದ್ದಿದ್ದ ಚಿರಂಜೀವಿ ಸರ್ಜಾ, ಹಲವು ಯಶಸ್ವಿ ಚಿತ್ರಗಳ ಮೂಲಕ ಸಿನಿ ಪ್ರೇಮಿಗಳ ಮನದಲ್ಲಿ ಅಚ್ಚಳಿಯದೆ ಉಳಿದಿದ್ದರು. ಇನ್ನಷ್ಟು ಹೊಸ ಬಗೆಯ ಸಿನಿಮಾಗಳ ಮೂಲಕ ಎಲ್ಲರನ್ನೂ ರಂಜಿಸುವ ಉತ್ಸಾಹದಲ್ಲಿದ್ದ ಚಿರಂಜೀವಿ, ನಿಜಕ್ಕೂ ಚಿರಂಜೀವಿಯಾಗಿಯೇ ಉಳಿದಿದ್ದಾರೆ.

ವಾಯುಪುತ್ರ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಅವರಿಗೆ ಆ ಚಿತ್ರ ಹೇಳಿಕೊಳ್ಳುವಂತಹ ದೊಡ್ಡ ಗೆಲುವು ತಂದುಕೊಡದಿದ್ದರೂ, ಚಿರು ಎಂಬ ಯುವ ನಟ ಬೆಳಕಿಗೆ ಬಂದಿದ್ದು ಸುಳ್ಳಲ್ಲ. ಆ ಬಳಿಕ ಚಿರು ತಮ್ಮ ಸ್ವಂತ ಸಾಮರ್ಥ್ಯದಿಂದಲೇ ಹೊಸ ಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಂಡು ಯಶಸ್ಸಿನ ಮೆಟ್ಟಿಲು ಏರಿದರು. ಈವರೆಗೆ ಸುಮಾರು 22ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಚಿರಂಜೀವಿ ಸರ್ಜಾ ಎಲ್ಲಾ ಜಾನರ್‌ನ ಸಿನಿಮಾಗಳಲ್ಲಿ ಕಾಣಿಸಿಕೊಂಡು ವರ್ಸಟೈಲ್‌ ಆ್ಯಕ್ಟರ್‌ ಎಂದೇ ಕರೆಸಿಕೊಂಡಿದ್ದರು.

2009ರಲ್ಲಿ ಚಿರು ವಾಯುಪುತ್ರ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾದರು. ನಂತರದ ದಿನಗಳಲ್ಲಿ ಅವರು ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಷಲ್‌, ಚಂದ್ರಲೇಖ, ಅಜಿತ್‌, ರುದ್ರತಾಂಡವ, ಆಟಗಾರ, ಆಕೆ,ಸಂಹಾರ, ಸೀಜರ್‌, ಅಮ್ಮಾ ಐ ಲವ್‌ಯು, ಸಿಂಗ, ಖಾಕಿ, ಆದ್ಯ, ಶಿವಾರ್ಜುನ ಚಿತ್ರಗಳಲ್ಲಿ ನಟಿಸಿದ್ದರು. ಪ್ರತಿ ಸಿನಿಮಾಗಳಲ್ಲೂ ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿದ್ದ ಅವರು ಸೋಲು-ಗೆಲುವಿನ ಲೆಕ್ಕಾಚಾರ ಹಾಕದೆ ಬಂದಿದ್ದನ್ನು ಸ್ವೀಕರಿಸಿ ಮುನ್ನಡೆಯುತ್ತಿದ್ದರು.

ಕನ್ನಡ ಚಿತ್ರರಂಗದಲ್ಲಿ ನಟರು ವರ್ಷಕ್ಕೆ ಎರಡು ಸಿನಿಮಾಗಳಲ್ಲಿ ನಟಿಸುವ ಮೂಲಕ ನಿರ್ಮಾಪಕರ ಸಹಾಯಕ್ಕೆ ಬರಬೇಕು ಎಂಬ ಮಾತು ಕೇಳಿಬರುತ್ತಲೇ ಇದೆ. ಈ ನಿಟ್ಟಿನಲ್ಲಿ ಚಿರಂಜೀವಿ ಕೂಡ ಮೊದಲಿನಿಂದಲೂ ನಿರ್ಮಾಪಕರ ಸ್ನೇಹಿ ನಟರಾಗಿಯೇ ಬಂದವರು. ಅದೇ ಹಾದಿಯಲ್ಲಿ ಸಾಗಿದ ಆವರು, ವರ್ಷಕ್ಕೆ ಎರಡು, ಮೂರು ಸಿನಿಮಾಗಳಲ್ಲಿ ನಟಿಸುವ ಮೂಲಕ ನಿರ್ಮಾಪಕರ ಪರ ಇದ್ದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.