ಕಾಫಿ ವಿಥ್‌ ರಾಜಹಂಸ

Team Udayavani, Jul 22, 2017, 10:36 AM IST

rajahamsa.jpg

ಇತ್ತೀಚೆಗಷ್ಟೇ “ರಾಜಹಂಸ’ ಚಿತ್ರದ ಆಡಿಯೋ ಬಿಡುಗಡೆಯಾಗಿತ್ತು. ಈಗ ಆ ಚಿತ್ರದ ಹಾಡುಗಳಿಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಸಿನಿಮಾದ ಹಾಡೊಂದರಲ್ಲಿ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ, ಡಾ.ಚಂದ್ರಶೇಖರ ಕಂಬಾರ, ಮಾಸ್ಟರ್‌ ಹಿರಣ್ಣಯ್ಯ, ಆನಂದ್‌ ಗುರೂಜಿ ಕಾಣಿಸಿಕೊಂಡಿದ್ದಾರೆ.

ಹೌದು, ಜೋಶ್ವಾ ಶ್ರೀಧರ್‌ ಸಂಗೀತದಲ್ಲಿ ಮೂಡಿಬಂದ “ಜನಗಣಮನ ದೇಶ …’ ಎಂಬ ಲಿರಿಕಲ್‌ ವಿಡೀಯೋ ಹಾಡನ್ನು ಇತ್ತೀಚೆಗೆ ಗೀತರಚನೆಕಾರ ಜಯಂತ್‌ ಕಾಯ್ಕಿಣಿ ಅವರು ಬಿಡುಗಡೆ ಮಾಡಿದ್ದರು. ಧನಂಜಯ ದಿಡಗ ಬರೆದ ಗೀತೆಗೆ ರಘುದೀಕ್ಷಿತ್‌ ದನಿಯಾಗಿರುವ ಈ ಹಾಡಲ್ಲಿ ಇವರೆಲ್ಲರೂ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ನಾಯಕನಿಗೆ ಯಾರೇ ವಿಶೇಷವಾಗಿ ಕಂಡರೂ, ಅವರೊಂದಿಗೆ ಕೆಲ ಹೊತ್ತು ಮಾತನಾಡಿ, ಕಾಫಿ ಕುಡಿದು ಸೆಲ್ಫಿ ತೆಗೆದುಕೊಳ್ಳುವ ಹವ್ಯಾಸ. ವಿಶೇಷ ವ್ಯಕ್ತಿಗಳ ಜತೆಗೆ ಕಾಫಿ ಕುಡಿಯುತ್ತ ಅವರ ಅನುಭವ ಹಂಚಿಕೊಳ್ಳುವ ಹವ್ಯಾಸವುಳ್ಳ ನಾಯಕ, ಅದರ ಸಲುವಾಗಿಯೇ, ಅವನು ಭಾರತದ ಅನೇಕ ರಾಜ್ಯವನ್ನು ಸುತ್ತುತ್ತಾನೆ. ಹಾಗಾಗಿಯೇ ಚಿತ್ರದ ಆ ಹಾಡನ್ನೂ ಸಹ ಉತ್ತರ ಭಾರತದ ಜೈಪುರ, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಹರಿದ್ವಾರ, ಹೃಷಿಕೇಶ, ಕಾಶಿ ಹೀಗೆ ಸುಮಾರು ಹತ್ತು ರಾಜ್ಯಗಳಲ್ಲಿ ಚಿತ್ರೀಕರಿಸಲಾಗಿದೆ. 

ಚಿತ್ರದಲ್ಲಿ ನಾಯಕನದು ವಿಶೇಷ ವ್ಯಕ್ತಿಗಳನ್ನು ಪರಿಚಯಿಸಿಕೊಂಡು ಅವರೊಂದಿಗೆ ಕಾಫಿ ಕುಡಿದು, ಸೆಲ್ಫಿ ತೆಗೆಸಿಕೊಂಡು ಅವರ ಅನುಭವ ಹಂಚಿಕೊಳ್ಳುವ ವ್ಯಕ್ತಿತ್ವ ಹೊಂದಿರುವುದರಿಂದಲೇ, ನಾಯಕ ಗೌರಿಶಿಖರ್‌, ಕೂಡ “ಕಾಫಿ ವಿತ್‌ ರಾಜ ಹಂಸ’ ಎನ್ನುವ ಕಾನ್ಸೆಪ್ಟ್ ಮೂಲಕ ಈಗಾಗಲೇ ಶಿವರಾಜ್‌ಕುಮಾರ್‌, ಪುನೀತ್‌ ರಾಜ್‌ಕುಮಾರ್‌, ಶ್ರೀಮುರಳಿ ಸೇರಿದಂತೆ ಅನೇಕರ ಜತೆ ಕಾಫಿ ಸವಿದು ಚಿತ್ರಕ್ಕೆ ಅವರ ಆಶೀರ್ವಾದ ಪಡೆದಿದ್ದಾರೆ.

ಇನ್ನೊಂದು ವಿಷಯವೆಂದರೆ, ಈ ಚಿತ್ರದಲ್ಲಿ ಆಟೋ ಡ್ರೈವರ್‌ಗಳು, ಪೌರಕಾರ್ಮಿಕರೂ ಹಾಡಲ್ಲಿ ಕಾಣಿಸಿಕೊಂಡಿದ್ದಾರೆ.  ಸದ್ಯಕ್ಕೆ ಟ್ರೇಲರ್‌ ಬಿಡುಗಡೆಗೆ ರೆಡಿಯಾಗಿರುವ ಚಿತ್ರತಂಡ, ಆಗಸ್ಟ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳುತ್ತಿದೆ. ಚಿತ್ರವನ್ನು ಜಡೇಶ್‌ ಕುಮಾರ್‌ ನಿರ್ದೇಶಿಸಿದ್ದು, ರಂಜನಿ ರಾಘವನ್‌ ಇಲ್ಲಿ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಯಮುನಾ, ಬಿ.ಸಿ.ಪಾಟೀಲ್‌, ತಬಲಾನಾಣಿ, ರಾಜು ತಾಳಿಕೋಟೆ, ಬುಲೆಟ್‌ ಪ್ರಕಾಶ್‌, ವಿಜಯ್‌ ಚೆಂಡೂರ್‌ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.