
ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್
Team Udayavani, May 31, 2023, 3:31 PM IST

ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ಖ್ಯಾತಿಯ ನಟ ಕಂ ನಿರ್ದೇಶಕ ರವಿಚಂದ್ರನ್ ಅವರಿಗೆ ಮಂಗಳವಾರ ಹುಟ್ಟುಹಬ್ಬದ ಸಂಭ್ರಮ. 62ನೇ ವಸಂತಕ್ಕೆ ಕಾಲಿಟ್ಟ ರವಿಚಂದ್ರನ್ ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಅನೇಕ ಗಣ್ಯರು ಶುಭ ಹಾರೈಸಿದರು.
ಇನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಹುಟ್ಟುಹಬ್ಬದ ವಿಶೇಷ ಉಡುಗೊರೆಯಾಗಿ, ರವಿಚಂದ್ರನ್ ಅಭಿನಯಿಸುತ್ತಿರುವ ಎರಡು ಸಿನಿಮಾಗಳ ಸ್ಪೆಷಲ್ ಪೋಸ್ಟರ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿದ್ದು, ಎರಡೂ ಚಿತ್ರತಂಡಗಳು ಕೂಡ ತಮ್ಮ ನೆಚ್ಚಿನ ನಟನಿಗೆ ಜನ್ಮದಿನದ ಶುಭಾಶಯ ಕೋರಿವೆ.
ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ “ಕೆಡಿ’ ಸಿನಿಮಾದಲ್ಲಿ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ರವಿಚಂದ್ರನ್ ಅವರ ಫಸ್ಟ್ ಲುಕ್ ಅನ್ನು “ಕೆಡಿ’ ಟೀಮ್ ರಿಲೀಸ್ ಮಾಡಿತ್ತು. ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ಧರಿಸಿದ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಇದೀಗ ರವಿಚಂದ್ರನ್ ಬರ್ತ್‌ಡೇ ಪ್ರಯುಕ್ತ “ಕೆ ಡಿ’ ಸಿನಿಮಾದಲ್ಲಿ ರವಿಚಂದ್ರನ್ ಅವರ ಸ್ಪೆಷಲ್ ಲುಕ್ ಇರುವಂತಹ ಹೊಸ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಇದರ ಜೊತೆಗೆ ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ಮೆಂಟ್ ಸಿನಿಮಾದಲ್ಲಿ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ “ದ ಜಡ್ಜ್ಮೆಂಟ್’ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ರವಿಚಂದ್ರನ್ ಅವರ ಜನ್ಮದಿನದ ಅಂಗವಾಗಿ “ದ ಜಡ್ಜ್ಮೆಂಟ್’ ಚಿತ್ರತಂಡ ಕೂಡ ಸಿನಿಮಾದಲ್ಲಿ ರವಿಚಂದ್ರನ್ ಅವರ ಸ್ಪೆಷಲ್ ಲುಕ್ ಇರುವ ಪೋಸ್ಟರ್ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿ, ಶುಭ ಕೋರಿದೆ.
ಸದ್ಯ ಬಿಡುಗಡೆಯಾಗಿರುವ “ಕೆಡಿ’ ಮತ್ತು “ದ ಜಡ್ಜ್ಮೆಂಟ್’ ಎರಡೂ ಸಿನಿಮಾದ ಗೆಟಪ್ ರವಿಚಂದ್ರನ್ ಅಭಿಮಾನಿಗಳ ಗಮನ ಸೆಳೆಯುವಂತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

Ronnie; ಸದ್ದು ಮಾಡುತ್ತಿದೆ ಧರ್ಮ ಕೀರ್ತಿರಾಜ್ ರ ‘ರೋನಿ’ ಟ್ರೇಲರ್

Sandalwood; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿರೂಪ್ ಭಂಡಾರಿ

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್ ನಿರೀಕ್ಷೆ
MUST WATCH
ಹೊಸ ಸೇರ್ಪಡೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್ ನ ಲೈವ್ ಶೋನಲ್ಲೇ ಪಾಕ್ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು