ಜಂಟಲ್ಮನ್ ಹಾಡಿಗೆ ಸಾಥ್ ನೀಡಿದ ದರ್ಶನ್
ಹೊಸ ವರ್ಷಕ್ಕೆ ಚಿತ್ರದರ್ಶನ
Team Udayavani, Dec 25, 2019, 7:02 AM IST
ನಟ ಪ್ರಜ್ವಲ್ ದೇವರಾಜ್ ಅಭಿನಯದ “ಜಂಟಲ್ಮನ್’ ಚಿತ್ರ ಜನವರಿ ಕೊನೆಗೆ ತೆರೆಗೆ ಬರುತ್ತಿದೆ. ಮತ್ತೂಂದೆಡೆ ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ, ಚಿತ್ರದ ಒಂದೊಂದೆ ಹಾಡುಗಳ ಮೂಲಕ ಪ್ರಮೋಶನ್ ಕೆಲಸವನ್ನು ಮಾಡುತ್ತಿದೆ.
ಮಂಗಳವಾರ ಚಿತ್ರದ “ನಡುಗುತಿದೆ…’ ಎನ್ನುವ ಹಾಡು ಬಿಡುಗಡೆ ಯಾಗಿದ್ದು, ಹಾಡನ್ನು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡುವ ಮೂಲಕ “ಜಂಟಲ್ಮನ್’ಗೆ ಸಾಥ್ ನೀಡಿದ್ದಾರೆ. ವಸಿಷ್ಠ ಸಿಂಹ ಗಾಯನದಲ್ಲಿ ಮೂಡಿಬಂದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.
#GentleMan #Nadugutide @PrajwalDevaraj https://t.co/TdCpHfCP6x
— Darshan Thoogudeepa (@dasadarshan) December 24, 2019
“ಜಂಟಲ್ಮನ್’ ಚಿತ್ರದಲ್ಲಿ ನಾಯಕ ಪ್ರಜ್ವಲ್ ದೇವರಾಜ್ “ಸ್ಲಿಪಿಂಗ್ ಸಿಂಡ್ರೋಮ್’ ಅಥವಾ ಹೈಪರ್ ಸೋಮ್ನಿಯಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ದಿನಕ್ಕೆ 18 ಗಂಟೆ ಮಾಡುವ ನಿದ್ರೆ ಮಾಡುವ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ಜೋಡಿಯಾಗಿದ್ದಾರೆ. ಗುರುದೇಶಪಾಂಡೆ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ