ಅಭಿಮಾನಿಗಳ ಸಮ್ಮುಖದಲ್ಲಿ ದರ್ಶನ್ ಹುಟ್ಟುಹಬ್ಬ
Team Udayavani, Feb 17, 2018, 10:40 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಶುಕ್ರವಾರ ತಮ್ಮ 42 ನೇ ಹುಟ್ಟುಹಬ್ಬವನ್ನು ತಮ್ಮ ಅಪಾರ ಅಭಿಮಾನಿಗಳೊಂದಿಗೆ ಆಚರಿಸಿಕೊಂಡರು. ಗುರುವಾರ ಮಧ್ಯರಾತ್ರಿಯಿಂದಲೇ ದರ್ಶನ್ ಅವರ ಮನೆಯ ಮುಂದೆ ಸಾವಿರಾರು ಮಂದಿ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದರು.
ಅಭಿಮಾನಿಗಳನ್ನು ಕಂಡು ಖುಷಿಗೊಂಡ ದರ್ಶನ್, ಅವರೆಲ್ಲರನ್ನೂ ಪ್ರೀತಿಯಿಂದ ಮಾತನಾಡಿಸಿ, ಅವರೊಂದಿಗೆ ಸೆಲ್ಫಿಗೆ ಫೋಸ್ ಕೊಟ್ಟು, ಅಭಿಮಾನಿಗಳು ತಂದಿದ್ದ, ಕೇಕ್ ಕತ್ತರಿಸಿ ಸಂತಸ ವ್ಯಕ್ತಪಡಿಸಿದರಲ್ಲದೆ, ಅಭಿಮಾನಿಗಳ ಪ್ರೀತಿಯ ಅಭಿಮಾನವನ್ನು ಕೊಂಡಾಡಿದರು.
ಶುಕ್ರವಾರ ಬೆಳಗ್ಗೆಯಿಂದಲೇ ಅಭಿಮಾನಿಗಳು ದರ್ಶನ್ ಅವರಿಗಾಗಿ ದೊಡ್ಡ ಕೇಕ್ ಮತ್ತು ಹಾರ ಹಿಡಿದು ಅವರ ಮನೆ ಎದುರು ಕಾದು ನಿಂತಿದ್ದರು. ಎಲ್ಲರತ್ತ ಕೈ ಬೀಸಿದ ದರ್ಶನ್, ಅವರೊಂದಿಗೆ ಕೆಲ ಕ್ಷಣ ಕಳೆದು, ಅವರು ತಂದಿದ್ದ ಕೇಕ್ ಕತ್ತರಿಸಿ, ತಿನ್ನಿಸಿ, ತಿನ್ನುವ ಮೂಲಕ ಸಂಭ್ರಮಿಸಿದರು.
ಈ ವೇಳೆ, ದರ್ಶನ್ ಅವರ ತಾಯಿ ಮೀನಾ ತೂಗುದೀಪ, ಸಹೋದರ ದಿನಕರ್ ತೂಗುದೀಪ, ಸೇರಿದಂತೆ ಚಿತ್ರರಂಗದ ಅನೇಕರು ದರ್ಶನ್ ಅವರ ಮನೆಗೆ ಹೋಗಿ ಶುಭಾಶಯ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು