ಅಂಬಿ ಪುತ್ರನಿಗೆ “ದರ್ಶನ್’ ಹಾರೈಕೆ: ಟ್ವೀಟ್
Team Udayavani, Feb 13, 2019, 10:26 AM IST
ಸ್ಯಾಂಡಲ್ವುಡ್ನ ಜಲೀಲ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ “ಅಮರ್’ ಚಿತ್ರದ ಟೀಸರ್ ನಾಳೆ (ಫೆ. 14 ಪ್ರೇಮಿಗಳ ದಿನ) ಬಿಡುಗಡೆಯಾಗುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಶುಭಾಶಯ ಕೋರಿದ್ದಾರೆ.
ಹೌದು, ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, “ಪ್ರೀತಿಯ ತಮ್ಮ ಅಭಿಷೇಕ್ ಅಂಬರೀಷ್ಗೆ ಕನ್ನಡ ಚಿತ್ರರಂಗಕ್ಕೆ ಹಾರ್ಟ್ ಲೀ ವೆಲ್ ಕಮ್ ನಾಳೆ ಆತನ ಹೊಸ ಸಿನಿಮಾ “ಅಮರ್’ ಟೀಸರ್ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಆಶೀರ್ವದಿಸಿ ಹರಿಸಿ ಬೆಳೆಸಿ’ ಎಂದು ಕೋರಿದ್ದಾರೆ.
ಪ್ರೀತಿಯ ತಮ್ಮ ಅಭಿಷೇಕ್ ಅಂಬರೀಷ್ ಗೆ ಕನ್ನಡ ಚಿತ್ರರಂಗಕ್ಕೆ ಹಾರ್ಟ್ ಲೀ ವೆಲ್ ಕಮ್ ನಾಳೆ ಆತನ ಹೊಸ ಸಿನಿಮಾ ‘ಅಮರ್’ ಟೀಸರ್ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಆಶೀರ್ವದಿಸಿ ಹರಿಸಿ ಬೆಳೆಸಿ pic.twitter.com/9pjIspAqSQ
— Darshan Thoogudeepa (@dasadarshan) February 13, 2019
ಅಲ್ಲದೇ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ದರ್ಶನ್ ಅವರನ್ನು ಅಂಬರೀಷ್ ತಮ್ಮ ದೊಡ್ಡ ಮಗ ಎಂದೇ ಕರೆಯುತ್ತಿದ್ದರು. ದರ್ಶನ್ ಕೂಡ ಅಪ್ಪಾಜಿ ಎಂದು ಸಂಬೋಧಿಸುತ್ತಿದ್ದರು. ಹೀಗಾಗಿ ದರ್ಶನ್ ಅಂಬರೀಷ್ ಅವರ ಕುಟುಂಬದಲ್ಲಿ ಒಬ್ಬರಾಗಿದ್ದಾರೆ. “ಅಮರ್’ ಚಿತ್ರದ ಬಗ್ಗೆ ದರ್ಶನ್ ಮಾಡಿರುವ ಟ್ವೀಟ್ನ್ನು ಸುಮಲತಾ ಅಂಬರೀಶ್ ರೀಟ್ವೀಟ್ ಸಹ ಮಾಡಿದ್ದಾರೆ.
ಈಗಾಗಲೇ “ಅಮರ್’ ಚಿತ್ರದ ಬಗ್ಗೆ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿದೆ. ಇನ್ನು ಸಂದೇಶ್ ಕಂಬೈನ್ಸ್ ಮೂಲಕ ಸಂದೇಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ನಾಗಶೇಖರ್ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಿದ್ದು, ಸತ್ಯ ಹೆಗಡೆ ಛಾಯಾಗ್ರಹಣ, ಜೊ.ನಿ ಹರ್ಷ ಸಂಕಲನ ಕಾರ್ಯವಿದೆ.
ಚಿತ್ರದ ಹಾಡುಗಳಿಗೆ ಧನಂಜಯ್, ಇಮ್ರಾನ್, ಕಲೈ ನೃತ್ಯ ಸಂಯೋಜನೆ ಮಾಡುತ್ತಿದ್ದು, ರವಿವರ್ಮ, ಥ್ರಿಲ್ಲರ್ ಮಂಜು, ಅಂಬು ಅರಿವು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಅಭಿಷೇಕ್ಗೆ ನಾಯಕಿಯಾಗಿ ತಾನ್ಯಾ ಹೋಪ್ ಜೋಡಿಯಾಗಿದ್ದಾರೆ. ಉಳಿದಂತೆ ಸುಧಾರಾಣಿ, ದೇವರಾಜ್, ದೀಪಕ್ ಶೆಟ್ಟಿ, ಅರುಣ್ ಸಾಗರ್, ಚಿಕ್ಕಣ್ಣ, ಸಾಧುಕೋಕಿಲ, ನಿರೂಪ್ ಭಂಡಾರಿ ಮುಂತಾದ ಕಲಾವಿದರ ತಾರಾಗಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ