ದಾಸವರೇಣ್ಯ ಶ್ರೀ ವಿಜಯದಾಸರು ಹಾಡು ಬಿಡುಗಡೆ
Team Udayavani, Jan 13, 2024, 11:40 AM IST
“ದಾಸವರೇಣ್ಯ ಶ್ರೀವಿಜಯದಾಸರು’ ಚಿತ್ರದ ಧ್ವನಿ ಸುರುಳಿ ಇತ್ತೀಚೆಗೆ ಬಿಡುಗಡೆಯಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿ ಶುಭಕೋರಿದರು. ತ್ರಿವಿಕ್ರಮ ಜೋಶಿ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ.
“ಶ್ರೀವೇದವ್ಯಾಸರು ರಚಿಸಿದ ವೇದಗಳು ಸಾಮಾನ್ಯ ಜನರಿಗೆ ಅರ್ಥವಾಗುವುದು ಕಷ್ಟ. ಹರಿದಾಸರು ವೇದಗಳ ಸಾರವನ್ನು ಕನ್ನಡ ಭಾಷೆಯಲ್ಲಿ ಜನರಿಗೆ ಅರ್ಥವಾಗುವ ಹಾಗೆ ಹಾಡುಗಳ ಮೂಲಕ ನೀಡಿದ್ದಾರೆ. ಪುರಂದರ ದಾಸರ ನಂತರ ಬರುವ ವಿಜಯ ದಾಸರು 2800 ಕ್ಕೂ ಹೆಚ್ಚು ಸುಳಾದಿಗಳನ್ನು, ಸಾಕಷ್ಟು ದೇವರನಾಮಗಳನ್ನು ರಚಿಸಿದ್ದಾರೆ. ಹರಿದಾಸರ ಚಿತ್ರಗಳ ಹ್ಯಾಟ್ರಿಕ್ ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ. ವಿಜಯಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾರೈಸಿದರು.
” ಶ್ರೀದಾಸವರೇಣ್ಯ ವಿಜಯ ದಾಸರು ಚಿತ್ರವನ್ನು ನಮ್ಮ ತಂದೆ – ತಾಯಿಯ ಆಶೀರ್ವಾದದಿಂದ ನಿರ್ಮಿಸಿದ್ದೇನೆ. ಮುಂದೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಹರಿದಾಸರ ಕುರಿತಾದ ಚಿತ್ರಗಳನ್ನು ನಿರ್ಮಿಸುವ ಆಸೆಯಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ’ ಎನ್ನುವುದು ನಿರ್ಮಾಪಕ ತ್ರಿವಿಕ್ರಮ ಅವರ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ