ಲೆಗಸಿ ಚಿತ್ರಕ್ಕೆ ದೀಪ್ತಿ ಸತಿ ನಾಯಕಿ

ಮತ್ತೆ ಬಂದಳು "ಜಾಗ್ವಾರ್‌' ಚೆಲುವೆ

Team Udayavani, Jan 23, 2020, 7:05 AM IST

ನಟ ನಿಖೀಲ್‌ ಕುಮಾರ್‌ ಅಭಿನಯದ “ಜಾಗ್ವಾರ್‌’ ಚಿತ್ರದಲ್ಲಿ ಬೋಲ್ಡ್‌ ಆಗಿ ಅಭಿನಯಿಸಿ ಸಿನಿ ಪ್ರಿಯರ ಗಮನ ಸೆಳೆದಿದ್ದ ನಾಯಕ ನಟಿ ದೀಪ್ತಿ ಸತಿ, ಈಗ ಮತ್ತೂಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, “ಜಾಗ್ವಾರ್‌’ ಚಿತ್ರದ ಬಳಿಕ ಕನ್ನಡದ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರದ, ದೀಪ್ತಿ ಸತಿ ಈಗ “ಲೆಗಸಿ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

“ಪಂಚತಂತ್ರ’ ಖ್ಯಾತಿಯ ವಿಹಾನ್‌ ಗೌಡ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ದೀಪ್ತಿ ಸತಿ ನಾಯಕಿಯಾಗಿ ತೆರೆ ಮೇಲೆ ಬರುತ್ತಿದ್ದಾರೆ. ಈ ಹಿಂದೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ಕುರುಕ್ಷೇತ್ರ’ ಚಿತ್ರಕ್ಕೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿರುವ ಎಂ. ಸುಭಾಷ್‌ ಚಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಲೆಗಸಿ’ ಚಿತ್ರದಲ್ಲಿ ದೀಪ್ತಿ ಸತಿ ಮತ್ತೂಂದು ಬೋಲ್ಡ್‌ ಆ್ಯಂಡ್‌ ಗ್ಲಾಮರಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿಗಷ್ಟೇ ತನ್ನ ಮುಹೂರ್ತ ನೆರವೇರಿಸಿಕೊಂಡಿರುವ “ಲೆಗಸಿ’ ಚಿತ್ರತಂಡ ಜನವರಿ ಕೊನೆಯಿಂದ ಚಿತ್ರದ ಚಿತ್ರೀಕರಣಕ್ಕೆ ಪ್ಲಾನ್‌ ಹಾಕಿಕೊಂಡಿದ್ದು, ಬೆಂಗಳೂರು, ಮದ್ದೂರು, ದೊಡ್ಡಬಳ್ಳಾಪುರ, ಮಡಿಕೇರಿ, ರಾಮನಗರದ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 1990 ರಿಂದ 2019ರವರೆಗೆ ನಡೆಯುವ ಬರಹಗಾರನೊಬ್ಬನ ಜೀವನ ಹಾಗೂ ಆತನ ಮುಂದಿನ ಪೀಳಿಗೆ ಸಮಾಜವನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ಆಕ್ಷನ್‌, ಥ್ರಿಲ್ಲರ್‌ ಕಥೆಯ ಮೂಲಕ ನಿರ್ದೇಶಕರು ಹೇಳಲಿದ್ದಾರೆ. ಪ್ರೀತಿಯ ಜೊತೆ ತಂದೆ-ಮಗನ ಸೆಂಟಿಮೆಂಟ್‌ ಕಥೆ ಕೂಡ ಈ ಚಿತ್ರದಲ್ಲಿದೆ.

ಈ ಚಿತ್ರದಲ್ಲಿ ದೀಪ್ತಿ ಸತಿ ಅವರ ಪಾತ್ರ ಏನು? “ಲೆಗಸಿ’ಯೊಳಗೆ ಇನ್ನೂ ಏನೇನಿದೆ ಎಂಬಿತ್ಯಾದಿ ವಿವರಗಳನ್ನು ಚಿತ್ರತಂಡ ಇನ್ನೂ ಬಿಟ್ಟುಕೊಟ್ಟಿಲ್ಲ. “ಗ್ರೇಟ್‌ ಬ್ರೋಸ್‌ ಪಿಕ್ಚರ್’ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ “ಲೆಗಸಿ’ ಚಿತ್ರಕ್ಕೆ ಸುರೇಶ್‌ ರಾಜ್‌ ಸಂಗೀತ, ಸುಂದರ್‌ ಪಿ ಛಾಯಾಗ್ರಹಣವಿದೆ. ಒಟ್ಟಾರೆ ಸುಮಾರು ಎರಡು ವರ್ಷಗಳ ನಂತರ ಸ್ಯಾಂಡಲ್‌ವುಡ್‌ಗೆ ಕಂ ಬ್ಯಾಕ್‌ ಆಗುತ್ತಿರುವ ದೀಪ್ತಿ ಸತಿ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಾರಾ ಅನ್ನೋದನ್ನ ಇನ್ನು ಮುಂದೆ ಕಾದು ನೋಡಬೇಕು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ