ಫ‌ಸ್ಟ್‌ಲುಕ್‌ನಲ್ಲಿ “ಡೆಮೊ ಪೀಸ್‌’ ದರ್ಶನ

Team Udayavani, Sep 10, 2019, 3:03 AM IST

ನಟಿ ಸ್ಪರ್ಶ ರೇಖಾ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ “ಡೆಮೊ ಪೀಸ್‌’ ಇತ್ತೀಚೆಗೆ ತನ್ನ ಚಿತ್ರೀಕರಣವನ್ನು ಪೂರೈಸಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿದೆ. ಸದ್ಯ ಚಿತ್ರದ ರೀ-ರೆಕಾರ್ಡಿಂಗ್‌ ಕಾರ್ಯ ನಡೆಯುತ್ತಿದ್ದು, ಇದರ ನಡುವೆಯೇ ಚಿತ್ರತಂಡ “ಡೆಮೊ ಪೀಸ್‌’ ಚಿತ್ರದ ಫ‌ಸ್ಟ್‌ಲುಕ್‌ ಅನ್ನು ಬಿಡುಗಡೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಕನ್ನಡದ ಹಲವು ನಿರ್ದೇಶಕರ ಬಳಿ ಸಹಾಯಕರಾಗಿ ಕೆಲಸ ಮಾಡಿದ ಅನುಭವವಿರುವ ವಿವೇಕ್‌ ಮೊದಲ ಬಾರಿಗೆ “ಡೆಮೊ ಪೀಸ್‌’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇಂದಿನ ಜನರೇಶನ್‌ನ ಲವ್‌ ಕಂ ಆ್ಯಕ್ಷನ್‌ ಕಹಾನಿ ಇರುವ “ಡೆಮೊ ಪೀಸ್‌’ ಚಿತ್ರದಲ್ಲಿ “ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಭರತ್‌ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಸೋನಾಲ್‌ ಮಾಂತೇರೊ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸ್ಪರ್ಶ ರೇಖಾ, ಶ್ರೀಕಾಂತ್‌ ಹೆಬ್ಳೀಕರ್‌, ರೂಪೇಶ್‌, ಚಂದ್ರಚೂಡ್‌, ರೋಹಿತ್‌ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ರೇಖಾ ಮೂವೀಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಡೆಮೊ ಪೀಸ್‌’ ಚಿತ್ರಕ್ಕೆ ಚಿತ್ರಕ್ಕೆ ಬಾಲ ಸರಸ್ವತಿ ಅವರ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ರಾಮ್‌ ಸಂಗೀತ ಸಂಯೋಜಿಸಿದ್ದಾರೆ. ಮದನ್‌ ಹರಿಣಿ ನೃತ್ಯ ಹಾಗೂ ವಿಕ್ರಂ ಮೋರ್‌ ಚಿತ್ರಕ್ಕೆ ಸಾಹಸ ಸಂಯೋಜಿಸಿದ್ದಾರೆ. ಬೆಂಗಳೂರು, ದಾಂಡೇಲಿ, ತುಮಕೂರು ಸುತ್ತಮುತ್ತ “ಡೆಮೊ ಪೀಸ್‌’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ನವೆಂಬರ್‌ ವೇಳೆಗೆ “ಡೆಮೊ ಪೀಸ್‌’ ತೆರೆಗೆ ಬರುವ ಸಾಧ್ಯತೆ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ