ಜುಲೈ 5ಕ್ಕೆ “ದೇವಕಿ’

Team Udayavani, Jun 15, 2019, 3:00 AM IST

ಕಳೆದ ಎರಡು-ಮೂರು ತಿಂಗಳಿನಿಂದ ಪ್ರಮೋಶನ್‌ ಕೆಲಸಗಳಲ್ಲಿ ನಿರತವಾಗಿರುವ ಪ್ರಿಯಾಂಕಾ ಉಪೇಂದ್ರ ನಟನೆಯ “ದೇವಕಿ’ ಬಿಡುಗಡೆಗೆ ಅಂತೂ ದಿನಾಂಕ ನಿಗದಿಯಾಗಿದೆ. ಚಿತ್ರ ಜುಲೈ 5ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸುಮಾರು 150ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ದೇವಕಿ’ ಚಿತ್ರವನ್ನು ತೆರೆಗೆ ತರಲು ತಯಾರಿ ನಡೆಯುತ್ತಿದ್ದು, ವಿದೇಶಗಳಲ್ಲೂ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

“ದೇವಕಿ’ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಉಪೇಂದ್ರ-ಪ್ರಿಯಾಂಕಾ ಪುತ್ರಿ ಐಶ್ವರ್ಯಾ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಈ ಹಿಂದೆ “ಮಮ್ಮಿ’ ಚಿತ್ರವನ್ನು ನಿರ್ದೇಶಿಸಿದ್ದ ಲೋಹಿತ್‌ ಎರಡನೇ ಬಾರಿಗೆ ಈ ಚಿತ್ರದಲ್ಲಿ ಪ್ರಿಯಾಂಕಾ ಅವರಿಗೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಇನ್ನು “ದೇವಕಿ’ ಚಿತ್ರಕ್ಕೆ ವೇಣು ಕ್ಯಾಮರಾ, ರವಿಚಂದ್ರನ್‌ ಸಂಕಲನ ಕಾರ್ಯವಿದೆ. ಚಿತ್ರಕ್ಕೆ ನೊಬಿನ್‌ ಪೌಲ್‌ ಸಂಗೀತವಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ