
ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’
Team Udayavani, Mar 30, 2023, 10:57 AM IST

ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ “ಗುರುದೇವ್ ಹೊಯ್ಸಳ’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ಗುರುದೇವ್ ಹೊಯ್ಸಳ’ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಧನಂಜಯ ಗುರುದೇವ್ ಹೊಯ್ಸಳ ಎಂಬ ರಫ್ ಅಂಡ್ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ಕಳೆದ ವಾರ ಕಿಚ್ಚ ಸುದೀಪ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೊಂದು ಉತ್ತರ ಕರ್ನಾಟಕ ಭಾಷೆಯ ಸೊಗಡಿನ ಚಿತ್ರವಾಗಿದ್ದು, ಬಹುತೇಕ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ಆಗಿದೆ.
ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ. ಜಿ.ರಾಜ್ ನಿರ್ಮಿಸಿರುವ ಗುರುದೇವ್ “ಹೊಯ್ಸಳ’ ಚಿತ್ರವನ್ನು ವಿಜಯ್ ಎನ್ ನಿರ್ದೇಶಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಕಾರ್ತಿಕ್ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.
ಧನಂಜಯ್ ಅವರಿಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್, ರಾಘು ಶಿವಮೊಗ್ಗ, ಮಯೂರಿ ನಟರಾಜ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
