“ಚಂಬಲ್’ ಟೀಸರ್‌ಗೆ ಧನುಷ್ ಸಾಥ್: Watch

Team Udayavani, Dec 20, 2018, 6:10 PM IST

ಕಾಲಿವುಡ್‍ನ ಸ್ಟಾರ್ ನಟ ಧನುಷ್, ಕನ್ನಡದ “ಚಂಬಲ್’ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ನೀನಾಸಂ ಸತೀಶ್ ಅವರ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ಜೇಕಬ್ ವರ್ಗೀಸ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನಾಯಕನಾಗಿ ನೀನಾಸಂ ಸತೀಶ್, ನಾಯಕಿಯಾಗಿ ಸೋನು ಗೌಡ ನಟಿಸುತ್ತಿದ್ದಾರೆ. ಬುಧವಾರ ಸಂಜೆ ಚೆನ್ನೈನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಧನುಷ್ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. 

ಪ್ರಮುಖ ಪಾತ್ರಗಳಲ್ಲಿ ಕಿಶೋರ್, ಪವನ್ ಕುಮಾರ್, ರೋಜರ್ ನಾರಾಯಣ ಅಭಿನಯಿಸಿದ್ದು, ಇದೊಂದು ವಿಶೇಷವಾದ ಕಥಾಹಂದರವನ್ನೊಳಗೊಂಡಿದೆ. ಅಲ್ಲದೇ ಈ ಚಿತ್ರದ ಮೂಲಕ ತಾನು ಬೇರೆ ಭಾಷೆಗಳ ಮಾರುಕಟ್ಟೆಗೂ ಹೋಗಲಿದ್ದೇನೆಂದು ನಟ ನೀನಾಸಂ ಸತೀಶ್ ಹೇಳಿಕೊಂಡಿದ್ದರು.

ಚಿತ್ರದ ಒನ್‍ಲೈನ್ ಸ್ಟೋರಿ ಹಾಗೂ ದೃಶ್ಯಗಳನ್ನು ನೋಡಿ ಧನುಷ್ ಟೀಸರ್ ಬಿಡುಗಡೆ ಮಾಡುವುದಕ್ಕೆ ಒಪ್ಪಿಕೊಂಡು ಅವರೇ ಪುಟ್ಟ ಕಾರ್ಯಕ್ರಮ ಆಯೋಜಿಸಿ ಬಿಡುಗಡೆ ಮಾಡಿದ್ದಾರೆ. ಅಲ್ಲದೆ “ಇದೊಂದು ವಿಶೇಷವಾದ ಕತೆಯನ್ನು ಒಳಗೊಂಡಿರುವ ಚಿತ್ರದ ಟೀಸರ್ ಬಿಡುಗಡೆ ಮಾಡುವುದಕ್ಕೆನನಗೆ ಖುಷಿ ಆಗುತ್ತಿದೆ’ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರಂತೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ