ಹಿಂದಿ ಮ್ಯೂಸಿಕ್ ಆಲ್ಬಂನಲ್ಲಿ ಧರ್ಮ ಕೀರ್ತಿರಾಜ್
Team Udayavani, Jun 19, 2021, 1:51 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ನವಗ್ರಹ’ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಪರಿಚಯವಾಗಿದ್ದ ನಟ ಧರ್ಮ ಕೀರ್ತಿರಾಜ್, ಆ ನಂತರ ಹೀರೋ ಆಗಿ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡ ನಟ. ಸ್ಯಾಂಡಲ್ ವುಡ್ನ ಚಾಕೋಲೆಟ್ ಹೀರೋಗಳ ಪೈಕಿ ಒಬ್ಬರಾಗಿ ಗುರುತಿಸಿಕೊಂಡಿರುವ ಧರ್ಮ ಕೀರ್ತಿರಾಜ್, ಈಗ ಹಿಂದಿ ಮ್ಯೂಸಿಕ್ ಆಲ್ಬಂ ಮೂಲಕ ಬಾಲಿವುಡ್ಗೆ ಎಂಟ್ರಿಕೊಡುವ ತಯಾರಿಯಲ್ಲಿದ್ದಾರೆ.
ಹೌದು, “ಕಿತ್ನಾ ಮಜಾ ಹೈ’ ಎನ್ನುವ ನಾಲ್ಕು ನಿಮಿಷದ ಹಿಂದಿ ಮ್ಯೂಸಿಕ್ ವಿಡಿಯೋ ಆಲ್ಬಂನಲ್ಲಿ ಧರ್ಮ ಕೀರ್ತಿರಾಜ್ ಕಾಣಿಸಿಕೊಂಡಿದ್ದಾರೆ. ಪ್ರೀತಿಯಲ್ಲಿ ಮೋಸ ಹೋಗಿ ಆತ್ನಹತ್ಯೆಗೆ ಶರಣಾಗುವ ಹುಡುಗಿಯನ್ನು ಕಾಪಾಡಿ, ಅವಳಲ್ಲಿ ಅನುರಕ್ತನಾಗಿ ಒಂದಾಗುವ ಕಥೆ ಹೊಂದಿರುವ ಈ ಆಲ್ಬಂಗೆ ರವಿಶರ್ಮ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ:ವೈದ್ಯರ ಹೋರಾಟಕ್ಕೆ ನಟಿ ಆಶಿಕಾ ರಂಗನಾಥ್ ಬೆಂಬಲ
ಹೊಸ ಪ್ರತಿಭೆ ನಗ್ಮಾ ಅಕ್ತರ್ ಈ ಹಾಡಿನಲ್ಲಿ ನಾಯಕಿಯಾಗಿ ಕಾಣಿಸಿ ಕೊಂಡಿದ್ದಾರೆ. “ಯುನೈಟೆಡ್ ಫಿಲಿಂಸ್ ಎಂಟರ್ಟೈನ್ಮೆಂಟ್’ ಸಂಸ್ಥೆ ನಿರ್ಮಿಸಿರುವ ಈ ಆಲ್ಬಂಗೆ ಅಲ್ತಾಫ್ ಸಯ್ಯೀದ್ ಸಾಹಿತ್ಯ, ಸಂಗೀತದ ಜೊತೆಗೆ ಧ್ವನಿಯಾಗಿದ್ದಾರೆ. ಇತ್ತೀಚೆಗಷ್ಟೇ ಯೂ-ಟ್ಯೂಬ್ನಲ್ಲಿ ಬಿಡುಗಡೆಯಾಗಿರುವ ಈ ಹಾಡು ನಿಧಾನವಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ