‘ಧೀರ ಸಾಮ್ರಾಟ್‌’ಗೆ ಧ್ರುವ ಸರ್ಜಾ ಸಾಥ್‌


Team Udayavani, May 5, 2023, 5:30 PM IST

dheera samrat kannada movie

ಹೊಸಬರೇ ಸೇರಿ ಸಿದ್ಧಪಡಿಸಿರುವ ಚಿತ್ರ “ಧೀರಸಾಮ್ರಾಟ್’ ಸದ್ದಿಲ್ಲದೇ ತನ್ನ ಚಿತ್ರೀಕರಣ ಮುಗಿಸಿದ್ದು, ಇದೀಗ ಬಿಡುಗಡೆ ಹಂತಕ್ಕೆ ಬಂದಿದೆ. ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿರುವ ಚಿತ್ರತಂಡ ಚಿತ್ರ ಬಿಡುಗಡೆ ಮೊದಲ ಹಂತವಾಗಿ ಚಿತ್ರದ “ಏನ್‌ ಚಂದ ಕಾಣಿಸ್ತವಳ್ಳೆ’ ಹಾಡನ್ನು ಬಿಡುಗಡೆ ಮಾಡಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಟ ಧ್ರುವಸರ್ಜಾ ಹಾಡು ಬಿಡುಗಡೆಗೊಳಿಸಿ ಶುಭಕೋರಿದರು. “ತನ್ವಿ ಪ್ರೊಡಕ್ಷನ್‌ ಹೌಸ್‌’ ಅಡಿಯಲ್ಲಿ ನಿರ್ಮಾಣವಾಗಿರುವ ಚಿತ್ರಕ್ಕೆ, ಪವನ್‌ಕುಮಾರ್‌ ನಿರ್ದೇಶನವಿದೆ. ಪವನ್‌ಕುಮಾರ್‌(ಪಚ್ಚಿ) ಈ ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನೆಗೆಟಿವ್‌ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಜೊತೆ ಗೆ ಶೀರ್ಷಿಕೆ ಗೀತೆ ಮತ್ತು ಸಂಭಾಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ಕುಟುಂಬ ಸಮೇತ ನೋಡಬಹುದಾದ ಸಸ್ಪೆನ್ಸ್‌ -ಥ್ರಿಲ್ಲರ್‌ ಕಥೆಯನ್ನು ಹೊಂದಿದೆ. ಐದು ಧೀರ ಹುಡುಗರ ಗೆಳತನ ಹೇಗಿರುತ್ತೆ ಎಂಬುದನ್ನು ಹೇಳಲಾಗಿದೆ. ಕೊನೆತನಕ ಕುತೂಹಲ ಕಾಯ್ದಿರಿಸಿದ್ದು, ಕ್ಲೈಮಾಕ್ಸ್‌ನಲ್ಲಿ ಪ್ರೇಕ್ಷಕರು ಸೀಟಿನ ತುದಿಗೆ ಬರುವಂತೆ ಮಾಡುತ್ತದೆ. “ಸಾವಿಗೆ ಸಾವಿಲ್ಲ’ ಎಂಬ ಅಡಿಬರಹವಿದೆ. ಒಬ್ಬ ವ್ಯಕ್ತಿಗೆ ಸಂಬಂಧಿಸದೇ ಸಮಾಜದಲ್ಲಿ ಯಾವುದೋ ಒಂದು ವರ್ಗದಲ್ಲಿ ಶೋಷಣೆ ಆಗುತ್ತಿರುತ್ತದೆ. ಇಂತಹ ಮುಖ್ಯ ಅಂಶಗಳನ್ನು ಸನ್ನಿವೇಶಕ್ಕೆ ಬಳಸಲಾಗಿದೆ ’ ಎಂದು ಹೇಳಿದರು.

“ನಾನು “ಅದ್ದೂರಿ’ ಮಾಡಿದಾಗ ಹೊಸಬನಾಗಿದ್ದೆ. ಅಂದು ಪವನ್‌ಗೆ ಅವರು ಕೆಲಸ ಮಾಡುತ್ತಿದ್ದ ವಾಹಿನಿಯಲ್ಲಿ ಜಾಸ್ತಿ ಸಲ ಹಾಡನ್ನು ಪ್ರಸಾರ ಮಾಡು ಎಂದು ದುಂಬಾಲು ಬಿದ್ದಿದ್ದೆ. ನಮ್ಮದು ಹೋಗೋ ಬಾರೋ ಗೆಳತನ. ಈಗ ಅವರ ಪ್ರಥಮ ನಿರ್ದೇಶನದ ಚಿತ್ರ ಎಂದಾಗ ಅವರಿಗೆಪ್ರೋತ್ಸಾಹ ಕೊಡುವುದು ನಮ್ಮ ಕರ್ತವ್ಯವಾಗಿದೆ. ಹೊಸಬರಿಗೆ ಉತ್ತೇಜನ ನೀಡಿ ಅಂತ ಕೇಳಿಕೊಳ್ಳುತ್ತೇನೆ. ಇಂತಹ ಪ್ರತಿಭಾವಂತರನ್ನು ಬೆಳೆಸಿದರೆ, ಪ್ರೇರೇಪಿಸಿದರೆ ಅವರ ಕಲೆಗೆ ಬೆಲೆ ಕೊಟ್ಟಂತೆ ಆಗುತ್ತದೆ’ ಎಂದು ಶುಭಕೋರಿದರು ಧ್ರುವ ಸರ್ಜಾ.

ಚಿತ್ರದಲ್ಲಿ ರಾಕೇಶ್‌ ಬಿರಾದಾರ್‌ ಹಾಗೂ ಅದ್ವಿತಿ ಶೆಟ್ಟಿ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಶೋಭರಾಜ್, ನಾಗೇಂದ್ರ ಅರಸು, ಬಲರಾಜವಾಡಿ, ರಮೇಶ್‌ ಭಟ್, ಯತಿರಾಜ್, ಮನಮೋಹನ್‌ ರೈ, ಇಂಚರ, ಸಂಕಲ್ಪ್ ಪಾಟೀಲ್‌ ರವಿರಾಜ್, ಜ್ಯೋತಿ ಮರೂರು, ಶಂಕರ್‌ ಭಟ್, ಮಂಡ್ಯಾ ಚಂದ್ರು, ಗಿರಿಗೌಡ, ಪ್ರೇಮ, ಹರೀಶ್‌ ಅರಸ್‌. ಬೇಬಿ ಪರಿಣಿತ, ನಂದಿತ ಮುಂತಾದವರು ನಟಿಸಿದ್ದಾರೆ.

ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಚೇತನ್‌, ನಾಗೇಂದ್ರಪ್ರಸಾದ್‌ ಸಾಹಿತ್ಯ, ರಾಘವ್‌ ಸುಭಾಷ್‌ ಸಂಗೀತ ಸಂಯೋಜನೆ, ವೀರೇಶ್‌. ಎನ್‌.ಟಿ.ಎ-ಅರುಣ್‌ ಸುರೇಶ್‌ ಛಾಯಾಗ್ರಹಣವಿದೆ. ಕನಕಪುರ, ನೆಲಮಂಗಲ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rishab shetty supoorts for Love li trailer

Love li ಟ್ರೇಲರ್‌ಗೆ ರಿಷಭ್‌ ಸಾಥ್‌

ಬಾತ್ ಟಬ್ ನಲ್ಲಿ ಪ್ರಣೀತಾ; ಅಭಿಮಾನಿಗಳ ಮಿಶ್ರ ಪ್ರತಿಕ್ರಿಯೆ

Pranitha Subhash: ಬಾತ್ ಟಬ್ ನಲ್ಲಿ ಪ್ರಣೀತಾ; ಅಭಿಮಾನಿಗಳ ಮಿಶ್ರ ಪ್ರತಿಕ್ರಿಯೆ

Shivarajkumar is in non violence movie

‘ನಾನ್‌ ವೈಲೆನ್ಸ್‌’ಗೆ ಶಿವಣ್ಣ ಸಾಥ್‌

11

Sandalwood: ಸುದೀಪ್‌ – ಸಂದೇಶ್‌ ನಾಗರಾಜ್‌ ಚಿತ್ರಕ್ಕೆ ಹೇಮಂತ್‌ ರಾವ್‌ ಆ್ಯಕ್ಷನ್ ಕಟ್?

KD ಮುಗಿಸಿ ಹೊರಟ ಶಿಲ್ಪಾ ಶೆಟ್ಟಿ; ರೆಟ್ರೋ ಲುಕ್‌ನಲ್ಲಿ ಸತ್ಯವತಿ

KD ಮುಗಿಸಿ ಹೊರಟ ಶಿಲ್ಪಾ ಶೆಟ್ಟಿ; ರೆಟ್ರೋ ಲುಕ್‌ನಲ್ಲಿ ಸತ್ಯವತಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.