ಮಾರ್ಚ್‌ 5ರಿಂದ ದಿಗಂತ್‌ “ಮಾರಿಗೋಲ್ಡ್‌’

Team Udayavani, Feb 19, 2020, 7:01 AM IST

ಡಿಂಪಲ್‌ ಹುಡುಗ ದಿಗಂತ್‌ “ಮಾರಿಗೋಲ್ಡ್‌’ ಸಿನಿಮಾ ಒಪ್ಪಿಕೊಂಡ ಸುದ್ದಿಯನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈ ಚಿತ್ರದ ಚಿತ್ರೀಕರಣ ಮಾರ್ಚ್‌ 5 ರಿಂದ ಆರಂಭವಾಗುತ್ತಿದೆ. “ಮಾರಿಗೋಲ್ಡ್‌’ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ನಿರ್ದೇಶಿಸುತ್ತಿದ್ದು, ಆರ್‌.ವಿ. ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ರಘುವರ್ಧನ್‌ ನಿರ್ಮಾಣ ಮಾಡುತ್ತಿದ್ದಾರೆ.

ಇದೊಂದು ಕಾಮಿಡಿ ಥ್ರಿಲ್ಲರ್‌ ಜಾನರ್‌ ಕಥೆ ಹೊಂದಿದ್ದು, ಚಿತ್ರದಲ್ಲಿ ಹಾಸ್ಯದ ಜೊತೆ ಒಂದು ಗಂಭೀರ ಕಥೆಯೂ ಇದೆ. ನಾಯಕ ದಿಗಂತ್‌ ಜೊತೆಯಲ್ಲಿ ಮೂರು ಪ್ರಮುಖ ಪಾತ್ರಗಳಿದ್ದು, ಆ ಪೈಕಿ ಈಗ ಯಶ್‌ ಶೆಟ್ಟಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ಪ್ರಮುಖ ಪಾತ್ರಗಳ ತಲಾಶ್‌ ನಡೆಯುತ್ತಿದೆ ಎಂಬುದು ಚಿತ್ರತಂಡದ ಹೇಳಿಕೆ.

ಚಿತ್ರಕ್ಕೆ ವೀರ್‌ಸಮರ್ಥ್ ಸಂಗೀತವಿದ್ದು, ಎರಡು ಹಾಡುಗಳಿವೆ. ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣ ವಿದೆ. ಕೆ.ಎಂ.ಪ್ರಕಾಶ್‌ ಸಂಕಲನವಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ