MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್
Team Udayavani, Mar 27, 2024, 2:38 PM IST
ದಿಗಂತ್ ನಾಯಕರಾಗಿರುವ “ಮಾರಿಗೋಲ್ಡ್’ ಚಿತ್ರ ಏಪ್ರಿಲ್ 5ಕ್ಕೆ ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಯಾಯಿತು. ರಘು ವರ್ಧನ್ ನಿರ್ಮಾಣದ ಈ ಚಿತ್ರವನ್ನು ರಾಘವೇಂದ್ರ ನಾಯ್ಕ ನಿರ್ದೇಶಿಸಿದ್ದಾರೆ. ದಿಗಂತ್ ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟಿದ್ದಾರೆ.
“ಈ ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದೇವೆ. ಹೊಗೆ, ಧೂಳಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಒಮ್ಮೊಮ್ಮೆ ಏಳೆಂಟು ಟೇಕ್ ಆಗುತ್ತಿತ್ತು. ಚಿತ್ರ ನೋಡಿದಾಗ ಯಾಕೆ ಅಷ್ಟೊಂದು ಟೇಕ್ ತೆಗೆದುಕೊಂಡರು ಎನ್ನುವುದು ಗೊತ್ತಾಯಿತು. ನಾನೇನಾ ನಟಿಸಿರೋದು ಅನ್ನಿಸಿತು. ನನ್ನ ಬೆನ್ನು ನಾನೇ ತಟ್ಟಿಕೊಂಡು ಖುಷಿ ಪಟೆ ನಿರ್ಮಾಪಕರು ತುಂಬಾ ತಿಳಿದುಕೊಂಡಿದ್ದಾರೆ. ಅವರೇ ನಿರ್ದೇಶಕರಾಗಿದ್ದರೂ ಹೊಸ ಪ್ರತಿಭೆಗೆ ಅವಕಾಶ ಕೊಟ್ಟಿದ್ದಾರೆ. ವೀರಸಮರ್ಥ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ’ ಎಂದರು.
ಸಂಗೀತಾ ಶೃಂಗೇರಿ ಈ ಸಿನಿಮಾದ ನಾಯಕಿ.”ದಿಗಂತ್ ನನ್ನ ಶಾಲಾ ದಿನಗಳ ಕ್ರಶ್. ಅವರ ಜೊತೆ ಲವ್ಸ್ಟೋರಿ ಚಿತ್ರ ಮಾಡುವ ಆಸೆ ಇತ್ತು. ಆದರೆ, ಆ್ಯಕ್ಷನ್ ಸಿನಿಮಾ ಸಿಕ್ಕಿತು. ದಿಗಂತ್ ಜೊತೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎನ್ನುವುದು ಸಂಗೀತಾ ಮಾತು.
ನಿರ್ಮಾಪಕ ರಘುವರ್ಧನ್ ಮಾತನಾಡಿ, “”ಮಾರಿಗೋಲ್ಡ್’ ಆ್ಯಕ್ಷನ್, ಥ್ರಿಲ್ಲರ್ ಜಾನರ್ ಚಿತ್ರ. ಬೆಂಗಳೂರು, ಸಕಲೇಶಪುರ ಸುತ್ತ ಮುತ್ತ ಚಿತ್ರೀಕರಣ ನಡೆಸಿದ್ದೇವೆ’ ಎಂದರು.
ನಿರ್ದೇಶಕ ರಾಘವೇಂದ್ರ ಎಂ.ನಾಯ್ಕ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. ಈ ಚಿತ್ರದಲ್ಲಿ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ ಹೀಗೆ 4 ಪಾತ್ರಗಳ ಮೇಲೆ ಇಡೀ ಕಥೆ ಸುತ್ತುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ