ದಿಗಂತ್‌ ಕೈಯಲ್ಲಿ ಗೋಲ್ಡ್‌ ಬಿಸ್ಕೆಟ್‌!


Team Udayavani, May 4, 2020, 11:04 AM IST

ದಿಗಂತ್‌ ಕೈಯಲ್ಲಿ ಗೋಲ್ಡ್‌ ಬಿಸ್ಕೆಟ್‌!

ಕನ್ನಡ ಚಿತ್ರರಂಗದಲ್ಲಿ ದೂದ್‌ಪೇಡ ಎಂದೇ ಕರೆಸಿಕೊಳ್ಳುವ ಗುಳಿಕೆನ್ನೆ ಹುಡುಗ ದಿಗಂತ್‌ ಕೈಯಲ್ಲಿ ಈಗ ಎರಡು ಮತ್ತೂಂದು ಚಿತ್ರಗಳಿವೆ. ಸದ್ಯಕ್ಕೆ ದಿಗಂತ್‌ ಅಭಿನಯಿಸಿರುವ “ಹುಟ್ಟು ಹಬ್ಬದ ಶುಭಾಶಯಗಳು ‘ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದ ಮೇಲೆ ದಿಗಂತ್‌ಗೆ ನಿರೀಕ್ಷೆಯೂ ಇದೆ.

ಯೋಗರಾಜ್‌ ಭಟ್‌ ನಿರ್ದೇಶನದ “ಗಾಳಿಪಟ 2′ ಚಿತ್ರವೂ ಇದೆ. ಈ ಸಿನಿಮಾದಲ್ಲಿ ಗಣೇಶ್‌ ಹಾಗು ಪವನ್‌ಕುಮಾರ್‌ ದಿಗಂತ್‌ನೊಂದಿಗಿದ್ದಾರೆ. ಇನ್ನು, ಇದೇ ಮೊದಲ ಬಾರಿಗೆ ಕಾಮಿಡಿ ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಮಾರಿಗೋಲ್ಡ್‌’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ನಿರ್ದೇಶನ ಮಾಡುತ್ತಿದ್ದು, ಆರ್‌.ವಿ.ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು “ಮಾರಿಗೋಲ್ಡ್‌’ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. “ಮಾರಿಗೋಲ್ಡ್‌’

ಅಂದಾಕ್ಷಣ ಎಲ್ಲರಿಗೂ ಬಿಸ್ಕತ್‌ ನೆನಪಾಗಬಹುದು. ಇಲ್ಲಿ ಹೆಸರು ಮಾತ್ರ ಹಾಗೆ ಇಡಲಾಗಿದೆ. ಚಿತ್ರದೊಳಗಿರುವ ಕಥಾಹಂದರ ಹೊಸತನದೊಂದಿಗೆ ಕೂಡಿದ್ದು, ದಿಗಂತ್‌ಗೆ ಇದೇ ಮೊದಲ ಬಾರಿಗೆ ಒಂದು ವಿಶೇಷ ಪಾತ್ರ ಸೃಷ್ಟಿ ಮಾಡಲಾಗಿದೆ. ದಿಗಂತ್‌ ಕೂಡ ಕಥೆ, ಪಾತ್ರ ಮೆಚ್ಚಿಕೊಂಡು ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಹೊಸ ಬಗೆಯ ಕಥೆ, ಪಾತ್ರ ಎದುರು ನೋಡುತ್ತಿದ್ದ ದಿಗಂತ್‌ಗೆ “ಮಾರಿಗೋಲ್ಡ್‌’ ಹೊಸ ರೀತಿಯ ಸಿನಿಮಾ ಆಗಲಿದೆ ಎಂಬುದು ಸಿನಿಮಾ ತಂಡದ ಅಭಿಪ್ರಾಯ.

ಅಂದಹಾಗೆ, ಈಗಾಗಲೇ ಮೊದಲ ಹಂತದ ಚಿತ್ರದ ಚಿತ್ರೀಕರಣ ನಡೆದಿದೆ. ಬೆಂಗಳೂರು, ಚಿತ್ರದುರ್ಗ ಸುತ್ತಮುತ್ತಲ ಸ್ಥಗಳಲ್ಲಿ ಚಿತ್ರೀಕರಿಸಿರುವ ತಂಡ, ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗುವ ಹೊತ್ತಿಗೆ ಕೋವಿಡ್ 19 ಸಮಸ್ಯೆ ಎದುರಾಗಿದೆ. ಲಾಕ್‌ ಡೌನ್‌ ನಂತರ ಎರಡನೇ ಹಂತದ ಚಿತ್ರೀಕರಣಕ್ಕೆ ಹೊರಡಲು ಸಿದ್ಧತೆ ಮಾಡಿಕೊಂಡಿರುವ ಈ ಚಿತ್ರದಲ್ಲಿ ದಿಗಂತ್‌ಗೆ ಜೋಡಿಯಾಗಿ ಸಂಗೀತಾ ಶೃಂಗೇರಿ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ “ಟಗರು’ ಕಾಕ್ರೋಚ್‌ ಖ್ಯಾತಿಯ ಸುಧಿ, ಯಶ್‌ಶೆಟ್ಟಿ, ಸಂಪತ್‌ ಕುಮಾರ್‌ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.