Kannada Cinema; ‘ದಿಲ್ ಖುಷ್’ ನಿಂದ ಮೊದಲ ಹಾಡು ಬಂತು
Team Udayavani, Jan 4, 2024, 2:41 PM IST
ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನಿರ್ದೇಶಕ ಪ್ರಮೋದ್ ಜಯ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ಸಂಯೋಜಿಸಿದ್ದಾರೆ.
“ದಿಲ್ ಖುಷ್’ ಸಿನಿಮಾದ ಮೂಲಕ ರಂಜಿತ್ ಮೊದಲ ಬಾರಿಗೆ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸ್ಪಂದನಾ ಸೋಮಣ್ಣ ನಾಯಕಿಯಾಗಿದ್ದಾರೆ. ಉಳಿದಂತೆ ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಜಯಪ್ರಭ ಕಲರ್ ಫ್ರೇಮ್ಸ್’ ಬ್ಯಾನರ್ನಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ “ದಿಲ್ ಖುಷ್’ ಸಿನಿಮಾಕ್ಕೆ ಪ್ರಮೋದ್ ಜಯ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದು ನಿರ್ದೇಶನ ಮಾಡಿದ್ದಾರೆ.
ಸಿಂಪಲ್ ಸುನಿ ಸೇರಿದಂತೆ ಕೆಲ ನಿರ್ದೇಶಕರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಪ್ರಮೋದ್ ಜಯ ಈ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇನ್ನು “ದಿಲ್ ಖುಷ್’ ಸಿನಿಮಾದಲ್ಲಿ ಐದು ಹಾಡುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ