‘ಕಂಠಿ, ಸಾಹೇಬ’ ಚಿತ್ರ ನಿರ್ದೇಶಕ ಭರತ್ ನಿಧನ
Team Udayavani, Dec 25, 2020, 1:16 PM IST
ಬೆಂಗಳೂರು: ಕಂಠಿ, ಸಾಹೇಬ ಮುಂತಾದ ಸ್ಯಾಂಡಲ್ ವುಡ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಯುವ ನಿರ್ದೇಶಕ ಭರತ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, ನಿರ್ದೇಶಕ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಬಾಲಿವುಡ್ ಲವ್ ಬರ್ಡ್ಸ್: ಆಲಿಯಾ ಜೊತೆಗಿನ ಪ್ರೀತಿ ವಿಚಾರ ಬಿಚ್ಚಿಟ್ಟ ರಣಬೀರ್ ಕಪೂರ್
ಈ ಹಿಂದೆ ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಹಾಗೂ ನಟಿ ರಮ್ಯ ಅಭಿನಯದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್, ಕೆಲ ವರ್ಷಗಳ ಬಳಿಕ ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ’ಸಾಹೇಬ’ ಚಿತ್ರವನ್ನೂ ನಿರ್ದೇಶನ ಮಾಡಿದ್ದರು.
ಚಿತ್ರರಂಗವನ್ನೇ ಉಸಿರಾಗಿಸಿಕೊಂಡಿದ್ದ ನಿರ್ದೇಶಕ ಭರತ್ ರಾಮನಗರದ ಚಿಕ್ಕ ಮುಳುವಾಡಿ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದರು.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ: ಆರು ರಾಜ್ಯದ ಕೃಷಿಕರ ಜೊತೆ ಮೋದಿ ಸಂವಾದ
ಯುವ ನಿರ್ದೇಶಕ ಭರತ್ ಅವರ ಅಕಾಲಿಕ ಮರಣಕ್ಕೆ ಹಲವು ನಟ ನಟಿಯರು ಸೇರಿದಂತೆ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ