‘ಡಾಲರ್ಸ್ ಪೇಟೆ’ ಫಸ್ಟ್ ಲುಕ್ ಬಂತು
Team Udayavani, Jan 10, 2023, 5:22 PM IST
“ಡಾಲರ್ಸ್ ಪೇಟೆ’ ಎಂಬ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಮೋಹನ್ ಎನ್ ಮುನಿನಾರಾಯಣಪ್ಪ ಈ ಚಿತ್ರದ ನಿರ್ದೇಶಕರು. ಅನೇಕ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿ ನಾರಾಯಣಪ್ಪ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಹೊಸ ಹೆಜ್ಜೆ ಇಟ್ಟಿದ್ದು, ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದ ಫಸ್ಟ್ಲುಕ್ ಪೋಸ್ಟರ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ಯಾರೆಕ್ಟರ್ ಫೋಸ್ಟರ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.
ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್ ರಾಜು, ಮುಖ್ಯ ತಾರಾಬಳಗದಲ್ಲಿದ್ದು, ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ಕುಶಾಲ್.ಎಸ್, ದತ್ತು, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಿತ್ರ ಕ್ಕೆ ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ್ ಛಾಯಾ ಗ್ರ ಹಣ, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಪೂಜಾ.ಟಿ.ವೈ “ಡಾಲರ್ಸ್ ಪೇಟೆ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…