ವಿಜಯ್ ಬರ್ತ್ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ
Team Udayavani, Jan 20, 2022, 9:41 AM IST
ಇಂದು ನಟ ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಹಾಗಂತ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಅದಕ್ಕೆ ಕಾರಣ ತಮ್ಮವರನ್ನು ಕಳೆದುಕೊಂಡ ನೋವು. ವಿಜಯ್ ಕೆಲವು ತಿಂಗಳ ಹಿಂದೆಯಷ್ಟೇ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾರೆ. ಇದಲ್ಲದೇ, ಪುನೀತ್ ರಾಜ್ಕುಮಾರ್ ಅಗಲಿದ ನೋವು ಇನ್ನೂ ಮಾಸಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ವಿಜಯ್ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ವಿಜಯ್, ಅಭಿಮಾನಿಗಳಿಗೆ ನಮಸ್ಕಾರ. ಇಡೀ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ. ಇಂತಹ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲಾ ನನ್ನ ಹುಟ್ಟು ಹಬ್ಬದ ದಿನ ಭೇಟಿಯಾಗಬೇಕು ಎಂದುಕೊಂಡಿದ್ದೆ. ಕಳೆದ ನಾಲ್ಕು ದಶಕಗಳಿಂದ ನನ್ನನ್ನು ಸಾಕಿ ಸಲಹಿದ ನನ್ನಮ್ಮ, ಅಪ್ಪ ಈ ವರ್ಷ ವಿಧಿಯಾಟಕ್ಕೆ ಬಲಿಯಾದರು ಹಾಗೂ ಆತ್ಮೀಯರಾದ ಪುನೀತ್ ರಾಜ್ ಕುಮಾರ್ ಸಹ ನಮ್ಮನ್ನೆಲ್ಲಾ ಬಿಟ್ಟು ಹೋದರು. ಈ ನೋವುಗಳನ್ನು ಇಟ್ಟುಕೊಂಡು ನಾನು ಹುಟ್ಟು ಹಬ್ಬವನ್ನು ಹೇಗೆ ಸಂಭ್ರಮಿಸಲಿ. ಜತೆಗೆ ಕೋವಿಡ್ ಕೇಸುಗಳು ಸಹ ದಿನೇ ದಿನೇ ಹೆಚ್ಚಾಗುತ್ತಿವೆ. ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ಮತ್ತು ನನಗೆ ಅಪ್ಪ, ಅಮ್ಮ, ಅಪ್ಪು ಅವರನ್ನು ಕಳೆದುಕೊಂಡ ನೋವು ಕಾಡುತ್ತಿರುವುದರಿಂದ ಈ ವರ್ಷ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬದ ದಿನ ನಾನು ಮನೆಯಲ್ಲಿ ಇರುವುದಿಲ್ಲ. ನೀವಿದ್ದ ಕಡೆಯಿಂದಲೇ ನನಗೆ ಹಾರೈಸಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ