ಬರ್ತ್‌ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್‌ ಮನವಿ

Team Udayavani, Jan 17, 2021, 2:28 PM IST

ಬರ್ತ್‌ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್‌ ಮನವಿ

ಇತ್ತೀಚೆಗಷ್ಟೇ ನಟ ಚಾಲೆಂಜಿಂಗ್‌ ಸ್ಟಾರ್‌ ಫೇಸ್‌ ಬುಕ್‌ ಲೈವ್‌ನಲ್ಲಿ ತಮ್ಮ ಅಭಿಮಾನಿಗಳಿಗೆ ದರ್ಶನ ನೀಡಿದ್ದು ಗೊತ್ತಿರಬಹುದು. ಈ ವೇಳೆ ದರ್ಶನ್‌, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ, ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಈಗ ಕನ್ನಡದ ಮತ್ತೂಬ್ಬ ಸ್ಟಾರ್‌ ನಟ ದುನಿಯಾ ವಿಜಯ್‌ ಕೂಡ ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಅಭಿಮಾನಿಗಳ ಮುಂದೆ ದರ್ಶನ ಕೊಟ್ಟಿದ್ದಾರೆ.

ಹೌದು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಫೇಸ್‌ಬುಕ್‌ ಲೈವ್‌ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದ ನಟ ದುನಿಯಾ ವಿಜಯ್‌, “ಎಲ್ಲರಿಗೂ ಗೊತ್ತಿರುವಂತೆ ಕೊರೊನಾ ಇನ್ನೂ ಹೋಗಿಲ್ಲ. ಅದಕ್ಕೆ ಔಷಧ ಸಹ ಇನ್ನು ಕೈಗೆ ಸಿಕ್ಕಿಲ್ಲ. ಹಾಗಾಗಿ ಈ ವರ್ಷ ನನ್ನ ಹುಟ್ಟುಹಬ್ಬ (ಜ.20) ಆಚರಿಸುವುದು ಬೇಡ. ನಾನು ಸಹ ಕುಟುಂಬದ ಜೊತೆಗೆ ಹೊರಗಡೆ ಬಂದಿರುವೆ. ಹೀಗಾಗಿ ದಯವಿಟ್ಟು ಈ ಅಭಿಮಾನಿಗಳು ಯಾರೂ ದೂರದ ಊರುಗಳಿಂದ ಮನೆ ಬಳಿ ಬರಬೇಡಿ. ಪ್ರತಿ ವರ್ಷ ನೀವು ನನ್ನ ಮನೆಗೆ ಬಂದ ಹಾರೈಸಿದ ಕಾರಣ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ಈ ವರ್ಷ ದಯವಿಟ್ಟು ತಮ್ಮ ಮನೆಗಳಿಂದ, ನೀವು ಇದ್ದಲ್ಲಿಯೇ ನೀವು ನನಗೆ ಆಶೀರ್ವಾದ ಮಾಡಿ, ನಿಮ್ಮ ಪ್ರೀತಿಯೇ ನನಗೆ ಖುಷಿ’ ಎಂದು ವಿಜಯ್‌ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:‘ಪ್ರಾರಂಭ’ಚಿತ್ರದಲ್ಲಿ ಲವರ್ ಬಾಯ್ ಆಗಿ ಕಾಣಿಸಲಿರುವ ಮನೋರಂಜನ್ ರವೀಚಂದ್ರನ್ ಗುಡ್ ಲುಕ್ಸ್

“ಪ್ರತಿ ವರ್ಷದಂತೆ ಕೇಟ್‌ ಮಾಡಿಸುವುದು, ಬ್ಯಾನರ್‌ ಹಾಕುವುದು, ಕಟೌಟ್‌ ನಿಲ್ಲಿಸುವುದು ಬೇಡ. ಅದೇ ದುಡ್ಡಿನಲ್ಲಿ ನಿಮ್ಮ ಅಕ್ಕ-ಪಕ್ಕದಲ್ಲಿ ರುವ ಹಿರಿಯರಿಗೆ ಅಥವಾ ಇನ್ಯಾರಿಗೋ ಬೆಡ್‌ಶೀಟ್‌ ಕೊಡಿಸಿ, ಇದು ಚಳಿಗಾಲ. ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಬೇಡ, ದುಡ್ಡು ವೆಚ್ಚ ಮಾಡುವುದು ಬೇಡ, ಅದರ ಬದಲು ಒಂದು ಪುಣ್ಯದ ಕೆಲಸಕ್ಕೆ ಕೈ ಜೋಡಿಸೋಣ’ ಎಂದು ದುನಿಯಾ ವಿಜಯ್‌ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಈ ಬಾರಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, “ಸಲಗ’ ಚಿತ್ರದ ಚಿತ್ರದ ಟೈಟಲ್‌ ಹಾಡನ್ನು ಬಿಡುಗಡೆ ಮಾಡುವುದಾಗಿ ವಿಜಯ್‌ ತಿಳಿಸಿದ್ದಾರೆ. “ಈ ಹಾಡನ್ನು ನೋಡಿ ಖುಷಿ ಪಟ್ಟರೆ ಅದೇ ನನಗೆ ಸಂತೋಷ’ ಎಂದಿದ್ದಾರೆ ವಿಜಯ್‌.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.