ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಮುಹೂರ್ತ
Team Udayavani, Sep 11, 2022, 5:23 PM IST
ದಿಗಂತ್ ನಾಯಕರಾಗಿರುವ “ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಮುಹೂರ್ತ ನಡೆದಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಾಮಿಡಿ ಜಾನರ್ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ.
ದಿಗಂತ್ ಗೆ ಜೋಡಿಯಾಗಿ ಯುವನಟಿ ಧನು ಹರ್ಷ ನಟಿಸಲಿದ್ದಾರೆ. ಶುಕ್ರವಾರದಿಂದ ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ.
ಇದನ್ನೂ ಓದಿ:ದಮ್ ಎಂದರೆ ದಮ್ ಬಿರಿಯಾನಿಯೇ?: ಸಿಎಂಗೆ ಸಿದ್ದರಾಮಯ್ಯ ಸವಾಲು
ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲವಾಗಿ ಮಾಡಲಾಗಿರುತ್ತದೆ. ಆದರೆ ಎಡಗೈ ಬಳಕೆದಾರರ ಸಂಖ್ಯೆ ಬಹಳ ಕಡಿಮೆ ಇದ್ದು, ಇದರಿಂದ ಅವರಿಗೆ ಒಂದಷ್ಟು ತೊಂದರೆಗಳು ಆಗುತ್ತಿವೆ. ಅದರ ಬಗೆಗಿನ ಕಥೆ ಇದಾಗಿದೆ.