ಪ್ರೇಮಿಗಳ ದಿನಕ್ಕೆ ‘ಪ್ರೇಮ್’ ಸಂದೇಶ…’ಏಕ್ ಲವ್ ಯಾ’ ಮೊದಲ ಸಾಂಗ್ ರಿಲೀಸ್
Team Udayavani, Feb 14, 2021, 2:31 PM IST
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಬ್ಯೂಟಿಫುಲ್ ಸಾಂಗ್ ‘ಯಾರೇ ಯಾರೇ’ ಇಂದು ರಿಲೀಸ್ ಆಗಿದೆ.
ಪ್ರೇಮಿಗಳ ದಿನಕ್ಕೆ ವಿಶೇಷ ಉಡುಗೊರೆಯಾಗಿ ಈ ಸಾಂಗ್ ಇಂದು ಬಿಡುಗಡೆಯಾಗಿದೆ. ನಿರ್ದೇಶಕ ಪ್ರೇಮ್ ಅವರೇ ಬರೆದಿರುವ ಈ ಗೀತೆಯ ಸಾಲುಗಳಿಗೆ ಖ್ಯಾತ ಗಾಯಕ ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಕನ್ನಡ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಟ್ಯೂನ್ ಹಾಕಿದ್ದಾರೆ. ಬಿಡುಗಡೆಯಾದ ಕೆಲವೆ ಗಂಟೆಗಳಲ್ಲಿ ಈ ಸಾಂಗ್ ಯುಟ್ಯೂಬ್ ನಲ್ಲಿ ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ. 10 ಸಾವಿರಕ್ಕೂ ಹೆಚ್ಚು ಮೆಚ್ಚುಗೆ ( ಲೈಕ್ಸ್ ) ಪಡೆದಿದೆ.
ಇನ್ನು ಸುದೀಪ್ ಹಾಗೂ ಶಿವರಾಜ್ ಕುಮಾರ್ ನಟನೆಯ ಬಹುತಾರಾಗಣದ ‘ದಿ ವಿಲನ್’ ಬಳಿಕ ಏಕ್ ಲವ್ ಯಾ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೂಲಕ ಪ್ರೇಮ್ ತಮ್ಮ ಬಾಮೈದ (ಪತ್ನಿ ರಕ್ಷಿತಾ ಪ್ರೇಮ್ ಸಹೋದರ) ರಾಣಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಏಕ್ ಲವ್ ಯಾ ಸಿನಿಮಾದಲ್ಲಿ ರಚಿತಾ ರಾಮ್ ಮತ್ತು ರೇಷ್ಮಾ ಅಭಿನಯಿಸಿದ್ದಾರೆ.