ಜನಪ್ರಿಯ ಬಿಗ್ ಬಾಸ್ ಸೀಸನ್ 7 ಶೋ ಆರಂಭಕ್ಕೆ ದಿನಗಣನೆ, ಈ ಬಾರಿ ಬಿಗ್ ಟ್ವಿಸ್ಟ್!

Team Udayavani, Oct 10, 2019, 12:56 PM IST

ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಸ್ಯಾಂಡಲ್ ವುಡ್ ನ ಕಿಚ್ಚ ಸುದೀಪ್ ನಡೆಸಿಕೊಡಲಿರುವ ಬಿಗ್ ಬಾಸ್ 7ನೇ ಸೀಸನ್ ಅಕ್ಟೋಬರ್ 13ರಿಂದ ಆರಂಭವಾಗಲಿದ್ದು, ಅದಕ್ಕಾಗಿ ದಿನಗಣನೆ ಆರಂಭವಾಗಿದೆ. ಅಷ್ಟೇ ಅಲ್ಲ ಈ ಬಾರಿ ದೊಡ್ಡ ಟ್ವಿಸ್ಟ್ ನೊಂದಿಗೆ ಬಿಗ್ ಬಾಸ್ ಶೋ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಆರು ಸೀಸನ್ ಅನ್ನು ಯಶಸ್ವಿಯಾಗಿ ಪೂರೈಸಿದ್ದು, 7ನೇ ಸೀಸನ್ ಕೂಡಾ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ. ಕಳೆದ ಸೀಸನ್ ನಲ್ಲಿ ಸೆಲೆಬ್ರಿಟಿಗಳ ಜತೆ ಸಾಮಾನ್ಯ ನಾಗರಿಕರು ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಪಡೆದಿದ್ದರು. ಆದರೆ 7ನೇ ಸೀಸನ್ ನಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಹರಿದಾಡುತ್ತಿರುವ ಊಹಾಪೋಹಗಳ ಶಿವರಾಜ್ ಕೆ.ಆರ್.ಪೇಟೆ, ನಟಿ ರಾಗಿಣಿ, ವಿಜಯಲಕ್ಷ್ಮಿ, ಪಾರುಲ್ ಯಾದವ್, ಕುರಿ ಪ್ರತಾಪ್, ಗಾಯಕ ಹನುಮಂತ ಸೇರಿದಂತೆ ಹಲವರು ಹೆಸರುಗಳು ಕೇಳಿಬರುತ್ತಿದೆ.

ಈ ಬಾರಿ ಬಿಗ್ ಬಾಸ್ ಮನೆಯನ್ನು ಯಾವೆಲ್ಲ ಸೆಲೆಬ್ರಿಟಿಗಳು ಪ್ರವೇಶಿಸಲಿದ್ದಾರೆ ಎಂಬ ಗುಟ್ಟು ಇನ್ನೂ ರಟ್ಟಾಗಿಲ್ಲ. ಅಂತೂ ಅಕ್ಟೋಬರ್ 14ರಿಂದ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಯಾವ ಸೆಲೆಬ್ರಿಟಿ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ ಎಂಬುದು ಬಯಲಾಗಬಹುದು!

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ