ಸ್ಫೂಕಿ ಕಾಲೇಜ್ ಫಸ್ಟ್ ಲುಕ್
Team Udayavani, Oct 5, 2020, 2:00 PM IST
“ರಂಗಿತರಂಗ’, “ಅವನೇ ಶ್ರೀಮನ್ನಾರಾಯಣ’ ಚಿತ್ರಗಳ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ ಹೊಸ ಚಿತ್ರದ ಟೈಟಲ್ ಅನೌನ್ಸ್ ಆಗಿದೆ. ಯುವ ಪ್ರತಿಭೆ ಭರತ್. ಜಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮೂಡಿಬರುತ್ತಿರುವ ಈ ಚಿತ್ರಕ್ಕೆ “ಸ್ಫೂಕಿಕಾಲೇಜ್’ ಎಂದು ಹೆಸರಿಟ್ಟಿದೆ ಚಿತ್ರತಂಡ. ಈಗ ಚಿತ್ರದ ಫಸ್ಟ್ಲುಕ್ ಬಿಡುಗಡೆ ಮಾಡಿದೆ.
ಈಗಾಗಲೇ “ಸ್ಫೂಕಿಕಾಲೇಜ್’ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಇದೇ ನವೆಂಬರ್ ಮೊದಲವಾರದಿಂದ ಚಿತ್ರದ ಚಿತ್ರೀಕರಣ ಶುರು ಮಾಡಲು ಪ್ಲಾನ್ ಹಾಕಿಕೊಂಡಿದೆ. “ಶ್ರೀದೇವಿ ಎಂಟರ್ಟೈನರ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ “ಸ್ಫೂಕಿ ಕಾಲೇಜ್’ ಚಿತ್ರದಲ್ಲಿ ವಿವೇಕ್ ಸಿಂಹ, ಖುಷಿ ರವಿ, ಪೃಥ್ವಿ ರಾಷ್ಟಕೂಟ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಪ್ರಕಾಶ್ ಬೆಳವಾಡಿ, ಹನುಮಂತೇ ಗೌಡ, ರಘು ರಮಣಕೊಪ್ಪ, ಅರವಿಂದ್ ಬೋಳಾರ್, ವಿಜಯ್ ಚೆಂಡೂರ್, ಎಂ.ಕೆ ಮಠ, ಅಶ್ವಿನ್ ಹಾಸನ್ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಚಿತ್ರದ ಮೊದಲ ಹಂತದ ಚಿತ್ರೀಕರಣ ಧಾರವಾಡದಲ್ಲಿ103 ವರ್ಷಗಳ ಇತಿಹಾಸವಿರುವಕಾಲೇಜೊಂದರಲ್ಲಿ ಆರಂಭವಾಗಲಿದ್ದು, ದ್ವಿತೀಯ ಹಂತದ ಚಿತ್ರೀಕರಣ ದಾಂಡೇಲಿಯ ದಟ್ಟ ಅರಣ್ಯ ಪ್ರದೇಶದಲ್ಲಿ ನಡೆಯಲಿದೆ. ಹಾರರ್,ಕಾಮಿಡಿ ಹಾಗೂ ಸೈಕಲಾಜಿಕಲ್ ಥ್ರಿಲ್ಲರ್ಕಥಾಹಂದರ ಹೊಂದಿರುವ “ಸ್ಫೂಕಿ ಕಾಲೇಜ್’ ಚಿತ್ರಕ್ಕೆ ಮನೋಹರ್ ಜೋಶಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನಕಾರ್ಯವಿದೆ. ಚಿತ್ರದ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದಾರೆ.